ಕಾಪು : ಪೆಟ್ರೋಲ್ , ಡೀಸೆಲ್ ಬೆಲೆಯೇರಿಕೆಯಿಂದ ಜನರ ಜೀವನ ದುಸ್ತರವಾಗಿದ್ದು, ಮೂಲ ಬೆಲೆಗಿಂತ ಎರಡು ಪಟ್ಟು ಹೆಚ್ಚು ತೆರಿಗೆ ವಿಧಿಸಿ, ತೈಲೋತ್ಪನ್ನಗಳನ್ನು ಮರಾಟ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರ ಜೀವನವನ್ನು ಹಿಂಡುತ್ತಿವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಆರೋಪಿಸಿದ್ದಾರೆ.
ಕಾಪು ಮಹಾಬಲ ಮಾಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಅವರು ಮಾತನಾಡಿದರು.
ಜನರಿಗೆ ಅಂಗೈಯಲ್ಲಿ ಆಕಾಶವನ್ನು ತಂದು ಕೊಡುವ ಭರವಸೆ ನೀಡಿರುವ ಬಿಜೆಪಿ, ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದ್ದರೂ ಜನ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಜನರ ಬದುಕುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದರು.
ಇದನ್ನೂ ಓದಿ: ಈ ಸರ್ಕಾರ ಬೆಲೆ ಏರಿಕೆ ಮಾಡಿದ್ದು ಬಿಟ್ಟರೆ, ಸಂಬಳ ಜಾಸ್ತಿ ಮಾಡಲಿಲ್ಲ: ಡಿ.ಕೆ.ಶಿವಕುಮಾರ್
ಕೇಂದ್ರ ಸರಕಾರ ಪ್ರತೀಯೊಬ್ಬರಿಗೂ ಉಚಿತ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಬೇಕಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನವಹಿ ಲಸಿಕೆ ವಿತರಣೆ, ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಒದಗಿಸಬೇಕಿದೆ ಎಂದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪ್ರಮುಖರಾದ ಶೇಖರ ಪೂಜಾರಿ, ಪ್ರದೀಪ್ ಪೂಜಾರಿ, ಪ್ರಶಾಂತ್ ಮಡಿವಾಳ, ರವಿಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.