Advertisement

ಯೋಗೇಶ್ವರ್ ಒಂಬತ್ತು ಕೋಟಿ ರೂ. ಸಾಲ ಮಾಡಿಕೊಂಡು ನಮ್ಮನ್ನು ಒಗ್ಗೂಡಿಸಿದ್ದರು: ಜಾರಕಿಹೊಳಿ

04:00 PM Jan 14, 2021 | Team Udayavani |

ಬೆಳಗಾವಿ: ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ಹಲವು ಶಾಸಕರು ಅಸಮಾಧಾನಗೊಂಡಿದ್ದು, ಅವರ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

Advertisement

ಯೋಗೇಶ್ವರ್ ಗೆ ಅಂದು ನಮ್ಮನ್ನು ಒಗ್ಗೂಡಿಸುವ ಕೆಲಸ ಯಾಕೆ ಬೇಕಿತ್ತು? ಕಷ್ಟಪಟ್ಟು ಆರೋಗ್ಯ ಹಾಳು ಮಾಡಿಕೊಂಡು, ಸಾಲ ಮಾಡಿಕೊಂಡು ಮಾಡುವುದು ಯಾಕೆ ಬೇಕಿತ್ತು. ಅವರು ತಮ್ಮ ಮನೆಯ ಮೇಲೆ ಒಂಬತ್ತು ಕೋಟಿ ರೂ. ಸಾಲ ಮಾಡಿಕೊಂಡರು. ಎಂ.ಟಿ.ಬಿ ನಾಗರಾಜ್ ಕಡೆಯಿಂದ ಸಿ.ಪಿ ಯೋಗೇಶ್ವರ್ ಅಂದು ಸಾಲ ತಂದರು. ಇದು ಯಾಕೆ ಬೇಕಿತ್ತು? ಈಗ ಮಾತನಾಡುವವರು ಆಗ ಎಲ್ಲಿದ್ದರು ಎಂದು ರಮೇಶ ಜಾರಕಿಹೊಳಿ‌ ಗರಂ ಆಗಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸರಿಯಾಗಿದೆ. ಈ ಸರ್ಕಾರದ ರಚನೆಯಲ್ಲಿ ಯೋಗೇಶ್ವರ್ ಪಾತ್ರ ಬಹಳ ದೊಡ್ಡದಿದೆ ಎಂದರು.

ಭ್ರಷ್ಟರಿಗೆ ರಮೇಶ್ ಜಾರಕಿಹೊಳಿ ಸಾಥ್ ಕೊಡುತ್ತಿದ್ದಾರೆ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಮಾತಾಡಿರುವುದು ನಮಗೆ ಆಶೀರ್ವಾದ ಅದರ ಬಗ್ಗೆ ನೋ ಕಮೆಂಟ್ಸ್ ಎಂದರು. ‌.

ಜಿ.ಪಂ, ತಾ.ಪಂ ಚುನಾವಣೆ ಆದ ಬಳಿಕ ಸಂಪುಟ ವಿಸ್ತರಣೆ ಆಗಬಹುದು. ಹೈಕಮಾಂಡ್ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.

Advertisement

ಇದನ್ನೂ ಓದಿ:ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು: ಡಿ ಕೆ ಶಿವಕುಮಾರ್ ಗುಡುಗು

ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, ರೇಣುಕಾಚಾರ್ಯ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಅದನ್ನು ಇಟ್ಟುಕೊಂಡು ಕೂಡುವ ಬದಲು ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ತಿರುಗೇಟು ನೀಡಿದರು.

ಮುರಗೇಶ್ ನಿರಾಣಿ ವಿಜಯೇಂದ್ರ ಬಳಿ ದುಡ್ಡು ಕೊಟ್ಟು ಸಚಿವರಾಗಿದ್ದಾರೆ ಎಂಬ ಯತ್ನಾಳ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ವಿಚಾರ ಅವರನ್ನೇ ಕೇಳುವುದು ಒಳ್ಳೆಯದು. ಯತ್ನಾಳ ಅವರು ಬಹಳ ಹಿರಿಯರು ಅವರು ಮಂತ್ರಿಯಾಗಬೇಕು ಅಂತಾ ನಮಗೆ ಆಸೆ ಇದೆ. ಅವರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಅಂತಾ ಬಯಸುತ್ತೇವೆ ಎಂದರು.

ಮಿತ್ರಮಂಡಳಿ ಸದಸ್ಯರ ಪರವಾಗಿ ರಮೇಶ್ ಮಾತಾಡುತ್ತಿಲ್ಲ ಎಂಬ ವಿಚಾರಕ್ಕೆ ಉತ್ತರಿಸಿದ ಅವರು, ಹಾದಿ ಬೀದಿಯಲ್ಲಿ ಮಾತನಾಡಲು ಆಗಲ್ಲ ಎಲ್ಲಿ ಮಾತನಾಡಬೇಕು ಅಲ್ಲಿ ಮಾತನಾಡುತ್ತೇವೆ. ಮುನಿರತ್ನ ನೂರಕ್ಕೆ ನೂರರಷ್ಟು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಂದುಕೊಂಡಿದ್ದೆ ಆದರೆ ಆಗಿಲ್ಲ. ಮುನಿರತ್ನ ಈಗ ನರ್ವಸ್ ಆಗಬಾರದು ಮುಂದಿನ‌ ದಿನಗಳಲ್ಲಿ ಹೈಕಮಾಂಡ್ ಜತೆಗ ಮಾತಾಡಿ ಮಂತ್ರಿ ಮಾಡುತ್ತೇವೆ ಎಂದು ಜಾರಕಿಹೊಳಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next