Advertisement

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

12:23 PM Oct 24, 2021 | Team Udayavani |

ಲಕ್ನೋ :” ರಾಮದ್ರೋಹಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದದ್ದು ಮಾತ್ರವಲ್ಲದೆ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿ ಉತ್ತರಪ್ರದೇಶದ ಅಭಿವೃದ್ಧಿಗೆ ಅಡ್ಡಿಪಡಿಸಿ ರಾಜ್ಯವನ್ನು “ಗಲಭೆಗಳ ಬೆಂಕಿಯಲ್ಲಿ ಎಸೆದಿದ್ದಾರೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಕಿಡಿ ಕಾರಿದ್ದಾರೆ.

Advertisement

ಬಿಜೆಪಿಯ ಹಿಂದುಳಿದ ವರ್ಗಗಳ ಸಮಾರಂಭದಲ್ಲಿ ಮಾತನಾಡಿದ ಸಿಎಂ ಯೋಗಿ, ”ಭಗವಾನ್ ರಾಮನ ಹಿತೈಷಿಗಳಲ್ಲದವರು ಎಂದಿಗೂ ನಿಮ್ಮ ಹಿತೈಷಿಗಳಾಗಲು ಸಾಧ್ಯವಿಲ್ಲ” ಎಂದರು.

”ಭಯೋತ್ಪಾದಕರನ್ನು ರಕ್ಷಿಸುವ, ಗಲಭೆಕೋರರನ್ನು ಅಪ್ಪಿಕೊಳ್ಳುವ, ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ರಾಮದ್ರೋಹಿಗಳಿಂದ ಅಂತರವನ್ನು ಕಾಯ್ದುಕೊಳ್ಳುವುದು ನಿಮ್ಮ ವರ್ತಮಾನಕ್ಕೆ ಮತ್ತು ನಿಮ್ಮ ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಉತ್ತಮ” ಎಂದರು.

”ಉತ್ತರ ಪ್ರದೇಶದಲ್ಲಿ ಹಿಂದಿನ ಸರಕಾರಗಳ ಅವಧಿಯಲ್ಲಿ, ಹಿಂದೂ ಹಬ್ಬಗಳಿಗೆ ಮುನ್ನ ಗಲಭೆಗಳು ನಡೆಯುತ್ತಿತ್ತು, ಜನಸಾಮಾನ್ಯರು ಹಬ್ಬಗಳನ್ನು ಆಚರಿಸಲು ಸಾಧ್ಯವಾಗುತ್ತಿರಲಿಲ್ಲ, ಕರ್ಫ್ಯೂ ನೆರಳಿನಲ್ಲಿ ಭಯದಿಂದ ಬದುಕುತ್ತಿದ್ದರು.ನಮ್ಮ ಸರಕಾರದ ಅವಧಿಯಲ್ಲಿ ಇದೆಲ್ಲವೂ ನಿಂತುಹೋಗಿದೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next