ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಜ್ಞಾನವಾಪಿ ಆವರಣಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ವಾರಣಾಸಿಯ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಸಂಜೆ ವೇಳೆಗೆ ಮುಖ್ಯಮಂತ್ರಿಗಳು ಕಾಶಿ ವಿಶ್ವನಾಥ ದೇವಸ್ಥಾನಕ್ಕೂ ತೆರಳಿ ಪೂಜೆ ಸಲ್ಲಿಸಿದರು.
ವಿವರಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವರು ‘ವ್ಯಾಸ್ ತೆಹಕಾನಾ’ದಲ್ಲಿ ಸ್ಥಾಪಿಸಲಾದ ಶಿಲ್ಪಗಳನ್ನು ವೀಕ್ಷಿಸಿ ಬಳಿಕ ಅಲ್ಲಿರುವ ನಂದಿಯನ್ನು ಅರ್ಚಕರ ಸಮ್ಮುಖದಲ್ಲಿ ಪೂಜಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡುವ ಮುನ್ನವೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾರಣಾಸಿಗೆ ಭೇಟಿ ನೀಡಿ 30 ಎಕರೆ ಜಾಗದಲ್ಲಿ ಸ್ಥಾಪಿಸಲಾಗಿರುವ 475 ಕೋಟಿ ರೂಪಾಯಿ ವೆಚ್ಚದ ಅಮುಲ್ ಸ್ಥಾವರವನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು ಮತ್ತು ಸರ್ಕ್ಯೂಟ್ ಹೌಸ್‌ನಲ್ಲಿ ಬಿಜೆಪಿಯ ಪ್ರತಿನಿಧಿಗಳು ಮತ್ತು ಶಾಸಕರನ್ನು ಭೇಟಿ ಮಾಡಿದರು. ಪ್ರಧಾನಿ ಅವರ ಭೇಟಿಗೆ ಸಕಾಲದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ನಗರ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.