Advertisement

ಲಕ್ನೋ ಹೋಟೆಲ್ ನಲ್ಲಿ ಅಗ್ನಿ ಅವಘಡ ಪ್ರಕರಣ : 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

11:48 AM Sep 11, 2022 | Team Udayavani |

ಲಕ್ನೌ : ನಾಲ್ವರ ಸಾವಿಗೆ ಕಾರಣವಾದ ಲಕ್ನೋದ ಲೆವನಾ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಕಾರಣವಾದ ನಿರ್ಲಕ್ಷ್ಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶದ ಮೇರೆಗೆ ಐದು ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Advertisement

ಘಟನೆಗೆ ಸಂಬಂಧಿಸಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು.

ಲಕ್ನೋ ಪೊಲೀಸ್ ಕಮಿಷನರ್ ಎಸ್ ಬಿ. ಶಿರಾಡ್ಕರ್ ಮತ್ತು ಕಮಿಷನರ್ (ಲಕ್ನೋ ವಿಭಾಗ) ರೋಷನ್ ಜೇಕಬ್ ಅವರನ್ನೊಳಗೊಂಡ ದ್ವಿಸದಸ್ಯ ತನಿಖಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಗೃಹ ಇಲಾಖೆ, ಇಂಧನ ಇಲಾಖೆ, ನೇಮಕಾತಿ ಇಲಾಖೆ, ಲಖನೌ ಅಭಿವೃದ್ಧಿ ಪ್ರಾಧಿಕಾರ (ಎಲ್‌ಡಿಎ) ಮತ್ತು ಅಬಕಾರಿ ಇಲಾಖೆಯಲ್ಲಿರುವ ಕೆಲ ಅಧಿಕಾರಿಗಳು ಸೇರಿದ್ದಾರೆ. ಇದರೊಂದಿಗೆ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಲಕ್ನೋದ ಹಜರತ್‌ಗಂಜ್ ಪ್ರದೇಶದ ಲೆವಾನಾ ಹೋಟೆಲ್ ನಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದರು.

Advertisement

ಇದನ್ನೂ ಓದಿ : ಶೀಂಬ್ರ : ಸಿದ್ಧಿ ವಿನಾಯಕ ದೇವಸ್ಥಾನದ ಸ್ನಾನ ಘಟ್ಟದಲ್ಲಿ ಕುಸಿತ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next