ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಹೀಗಾಗಿ ಅವರು ಐಸೋಲೇಶನ್ ಗೆ ಒಳಗಾಗಿದ್ದಾರೆ.
ಪ್ರಾಥಮಿಕ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ತಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ ಪಾಸಿಟಿವ್ ವರದಿಯಾಗಿದೆ. ಸದ್ಯ ಐಸೋಲೇಶನ್ ಗೆ ಒಳಗಾಗಿದ್ದು, ವೈದ್ಯರು ಹೇಳಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ ಎಂದು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಭಾರತದ ‘ಆತ್ಮನಿರ್ಭರ’ ಹಾದಿಯಲ್ಲಿ ಯುವಕರ ಪಾತ್ರ ನಿರಂತರವಾಗಿ ಹೆಚ್ಚಳವಾಗುತ್ತಿದೆ : ಮೋದಿ
ಇದಕ್ಕೂ ಮೊದಲು ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು.
ಉತ್ತರ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಬುಧವಾರದ ಬೆಳಗ್ಗಿನ ವರದಿಯಂತೆ 24 ಗಂಟೆ ಅವಧಿಯಲ್ಲಿ 17,963 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಈ ಅವಧಿಯಲ್ಲಿ 85 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.