Advertisement

ನಾಯಕತ್ವ ಬದಲಾವಣೆ ಊಹಾಪೋಹ: ಪ್ರಧಾನಿ ಮೋದಿ, ಶಾ ಭೇಟಿಗೆ ದೌಡಾಯಿಸಿದ ಸಿಎಂ ಯೋಗಿ

02:55 PM Jun 10, 2021 | Team Udayavani |

ನವದೆಹಲಿ: ಉತ್ತರಪ್ರದೇಶದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ದಟ್ಟವಾಗಿ ಊಹಾಪೋಹ ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ(ಜೂನ್ 10) ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಕೋವಿಡ್ ಹೆಚ್ಚಳ : ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ವಾರ ಲಾಕ್ : ಕೋಟ ಶ್ರೀನಿವಾಸ ಪೂಜಾರಿ

ಇಂದು 3ಗಂಟೆಗೆ ಸಿಎಂ ಯೋಗಿ ದೆಹಲಿಗೆ ಆಗಮಿಸುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂಬ ರಾಜಕೀಯದ ಬಿಕ್ಕಟ್ಟಿನ ಊಹಾಪೋಹದ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಹೈಕಮಾಂಡ್ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲು ಆಗಮಿಸಲಿದ್ದಾರೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next