ಲಕ್ನೋ: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 3 ತಿಂಗಳ ಕಾಲ ಉಚಿತ ಪಡಿತರ ನೀಡುವುದನ್ನು ವಿಸ್ತರಿಸಲು ನಿರ್ಧರಿಸಿದೆ.
ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಮಾಸಾಂತ್ಯಕ್ಕೆ ಈ ಯೋಜನೆ ಮುಕ್ತಾಯವಾಗಲಿತ್ತು. ಈ ಯೋಜನೆಯಿಂದ ಉತ್ತರ ಪ್ರದೇಶದಲ್ಲಿ 15 ಕೋಟಿ ಮಂದಿ ಬಡವರಿಗೆ ನೆರವಾಗುತ್ತಿದೆ. ಈ ಯೋಜನೆಯಡಿ ಜನರಿಗೆ ಬೇಳೆಕಾಳುಗಳು, ಉಪ್ಪು, ಸಕ್ಕರೆ ಮತ್ತು ಇತರ ಸಾಮಗ್ರಿಗಳನ್ನು ನೀಡಲಾಗುತ್ತದೆ. ಈ ಯೋಜನೆಯೇ ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ದಾಖಲೆಯ ಎರಡನೇ ಬಾರಿಗೆ ಗೆಲ್ಲಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ತನ್ನದೇ ಆಗಿರುವ ಅಂತ್ಯೋದಯ ಅನ್ನ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಿತ್ತು.
ಅಖಿಲೇಶ್ ನಾಯಕ:
ಇದೇ ವೇಳೆ, ಸಮಾಜವಾದಿ ಪಕ್ಷದ ನೂತನ ಶಾಸಕರ ಸಭೆ ಕೂಡ ಲಕ್ನೋದಲ್ಲಿ ನಡೆದಿದೆ. ಕರ್ಹಾಲ್ ಕ್ಷೇತ್ರದ ಶಾಸಕರಾಗಿರುವ ಅವರು, ಎಸ್‌ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಅವರು ಪ್ರತಿಪಕ್ಷ ನಾಯಕರಾಗಲಿದ್ದಾರೆ.