Advertisement
ಮಾಸಾಂತ್ಯಕ್ಕೆ ಈ ಯೋಜನೆ ಮುಕ್ತಾಯವಾಗಲಿತ್ತು. ಈ ಯೋಜನೆಯಿಂದ ಉತ್ತರ ಪ್ರದೇಶದಲ್ಲಿ 15 ಕೋಟಿ ಮಂದಿ ಬಡವರಿಗೆ ನೆರವಾಗುತ್ತಿದೆ. ಈ ಯೋಜನೆಯಡಿ ಜನರಿಗೆ ಬೇಳೆಕಾಳುಗಳು, ಉಪ್ಪು, ಸಕ್ಕರೆ ಮತ್ತು ಇತರ ಸಾಮಗ್ರಿಗಳನ್ನು ನೀಡಲಾಗುತ್ತದೆ. ಈ ಯೋಜನೆಯೇ ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ದಾಖಲೆಯ ಎರಡನೇ ಬಾರಿಗೆ ಗೆಲ್ಲಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ತನ್ನದೇ ಆಗಿರುವ ಅಂತ್ಯೋದಯ ಅನ್ನ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಿತ್ತು.
ಇದೇ ವೇಳೆ, ಸಮಾಜವಾದಿ ಪಕ್ಷದ ನೂತನ ಶಾಸಕರ ಸಭೆ ಕೂಡ ಲಕ್ನೋದಲ್ಲಿ ನಡೆದಿದೆ. ಕರ್ಹಾಲ್ ಕ್ಷೇತ್ರದ ಶಾಸಕರಾಗಿರುವ ಅವರು, ಎಸ್‌ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಅವರು ಪ್ರತಿಪಕ್ಷ ನಾಯಕರಾಗಲಿದ್ದಾರೆ. ಉತ್ತರಾಖಂಡದ ಮೊದಲ ಮಹಿಳಾ ಸ್ಪೀಕರ್ ರಿತು
ಉತ್ತರಾಖಂಡ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಿ ರಿತು ಖಂಡೂರಿ ಭೂಷಣ್ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ, ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿಯವರ ಪುತ್ರಿ. ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕೋಟಾªವರ್ ಕ್ಷೇತ್ರದಿಂದ ಕಾಂಗ್ರೆಸ್‌ನ ಸುರೇಂದ್ರ ನೇಗಿ ವಿರುದ್ಧ ಗೆದ್ದಿದ್ದಾರೆ.