Advertisement
ದೇಶದ ಹಲವೆಡೆ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್ ಸೋಮವಾರ ತಡರಾತ್ರಿ ಹಿರಿಯ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಹೊಸ ನಿಯಮಗಳನ್ನು ಪ್ರಕಟಿಸಲಾಗಿದೆ.
Related Articles
Advertisement
ಇದನ್ನೂ ಓದಿ:ಕಾಶಿಯಾತ್ರೆಗೆ ಸಹಾಯಧನ: ಸಚಿವೆ ಶಶಿಕಲಾ ಜೊಲ್ಲೆ
ಎಂಎನ್‌ಎಸ್ ಪ್ರತಿಭಟನೆ ಹತ್ತಿಕ್ಕಲು ಸಜ್ಜುಮಹಾರಾಷ್ಟ್ರದಲ್ಲಿರುವ ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ದಕಗಳನ್ನು ಮೇ 3ರೊಳಗಾಗಿ ತೆರವುಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಗಡುವು ನೀಡಿರುವ ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್‌ಎಸ್) ವತಿಯಿಂದ ಕೈಗೊಳ್ಳಲಾಗುವ ಯಾವುದೇ ಚಟುವಟಿಕೆಗಳ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆ ಸಜ್ಜಾಗಿದೆ ಎಂದು ರಾಜ್ಯದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ. ಮತ್ತೊಂದೆಡೆ, ಎಂಎನ್‌ಎಸ್ ಆಗ್ರಹಕ್ಕೆ ತನ್ನ ಬೆಂಬಲವಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಹೇಳಿದೆ. ಎನ್‌ಎಸ್‌ಎ ಅಡಿ ಕೇಸು
ನವದೆಹಲಿಯ ಜಹಾಂಗೀರ್‌ಪುರಿಯಲ್ಲಿನ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿರುವವರ ಪೈಕಿ ಐವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯ ಕೇಸು ದಾಖಲಿಸಲಾಗಿದೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನರಿಗೆ ನೀಡಿದ ಸೂಚನೆಯ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದೆಡೆ, ಘಟನೆಗೆ ಸಂಬಂಧಿಸಿದ ವರದಿಯನ್ನು ಗೃಹ ಇಲಾಖೆಗೆ ಸಲ್ಲಿಸಲಾಗಿದೆ. ಇದೊಂದು ಪೂರ್ವ ನಿಯೋಜಿತವೇ ಹೊರತು, ಏ.16ರಂದು ಹಠಾತ್ ಆಗಿ ನಡೆದ ಬೆಳವಣಿಗೆಯಲ್ಲ ಎಂಬ ಅಂಶವನ್ನು ಪೊಲೀಸರು ವರದಿಯಲ್ಲಿ ಪ್ರಧಾನವಾಗಿ ಉಲ್ಲೇಖಿಸಿದ್ದಾರೆ ಇದೇ ವೇಳೆ, ಸ್ಥಳದಲ್ಲಿ ನಿಧಾನವಾಗಿ ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಜಹಾಂಗೀರ್ ಪುರಿಯಲ್ಲಿ ಬಿಗಿ ಪಹರೆಯಲ್ಲಿ ನಿರತರಾಗಿರುವ ಪೊಲೀಸರು.