Advertisement

ಕೋವಿಡ್ 19 ಭೀತಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ ಉತ್ತರಪ್ರದೇಶ ಸರ್ಕಾರ

01:47 PM Jun 03, 2021 | Team Udayavani |

ನವದೆಹಲಿ:ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು(ಉತ್ತರಪ್ರದೇಶ ಮಾಧ್ಯಮಿಕ್ ಶಿಕ್ಷಾ ಪರಿಷದ್) ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿರುವುದಾಗಿ ಗುರುವಾರ (ಜೂನ್ 03) ತಿಳಿಸಿದೆ.

Advertisement

ಇದನ್ನೂ ಓದಿ:ಕೋವಿಡ್-19 ಸೋಂಕಿತರ ಪತ್ತೆಗೆ ಎಕ್ಸ್‌ರೇ ಸೇತು

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಡೆಪ್ಯುಟಿ ಮುಖ್ಯಮಂತ್ರಿ ದಿನೇಶ್ ಶರ್ಮಾ ಮತ್ತು ಲಕ್ನೋದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಿಯುಸಿ ಪರೀಕ್ಷೆ ಸಂಬಂಧಿಸಿದ ವರದಿಯನ್ನು ಶಿಕ್ಷಣ ಮಂಡಳಿ ಸಿದ್ಧಪಡಿಸಿ ಮುಖ್ಯಮಂತ್ರಿಗೆ ವರದಿಯನ್ನು ಸಲ್ಲಿಸಿತ್ತು. ಇದರಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಇತರ ಆಯ್ಕೆಗಳ ಸಲಹೆಗಳನ್ನು ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶದಲ್ಲಿ 26,09,501 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೆಸರನ್ನು ನೋಂದಾಯಿಸಿದ್ದರು. ಆದರೆ ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಉತ್ತರಪ್ರದೇಶ ಶಿಕ್ಷಣ ಮಂಡಳಿ ಪ್ರೌಢಶಾಲೆ (ಎಸ್ಸೆಸ್ಸೆಲ್ಸಿ) ಪರೀಕ್ಷೆಯನ್ನೂ ಕೂಡಾ ರದ್ದುಪಡಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next