Advertisement

ಯೋಗೀಶಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್‌ ಸೇರ್ಪಡೆ

07:35 AM Dec 21, 2017 | Team Udayavani |

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಬುಧವಾರ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

Advertisement

ನಗರದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ ಅವರು ಮಲ್ಲಮ್ಮ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಲ್ಲಮ್ಮ, ಬಿಜೆಪಿ ಮುಖಂಡರ ಹಾಗೂ ಕುಟುಂಬದ ಸದಸ್ಯರ ಕಿರಿಕಿರಿಯಿಂದ ಬೇಸತ್ತು ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್‌ ಸೇರಿದ್ದೇನೆ ಎಂದರು.

ತಮ್ಮ ಪತಿ ಯೋಗೀಶಗೌಡ ಅವರ ಹತ್ಯೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡಿದ್ದಾರೆ. ಈ ಪ್ರಕರಣದ ನಂತರ ಬಿಜೆಪಿಯವರು ತಮಗೆ ನಿತ್ಯ ಕಿರಿಕಿರಿ ನೀಡಿದರು. ಇದರಿಂದ ಬೇಸತ್ತು, ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡ ನಂತರ ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ಹೇಳಿದರು.

“ನಾನು ಹತ್ತಾರು ಬಾರಿ ಯೋಚನೆ ಮಾಡಿಯೇ ಈ ನಿರ್ಧಾರ ಕೈಗೊಂಡಿದ್ದೇನೆ. ನನಗೆ ಮಕ್ಕಳ ಭವಿಷ್ಯ ಮುಖ್ಯವಾಗಿದೆ’ ಎಂದು ಸ್ಪಷ್ಟಪಡಿಸಿದ ಅವರು, “ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು. ಪತಿಯ ಮನೆಯವರು ಹಾಗೂ ನನ್ನ ಕುಟುಂಬ ಸದಸ್ಯರು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯ ಮಾಡಿದರೆ ನಾನೂ ಸಹ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಇದನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next