Advertisement

Dalit ಅನ್ನುತ್ತೀರಿ, ಪಂಜರದಲ್ಲಿ ಇರಿಸಿದ್ದೀರಿ: ಸಿಎಂ ಸಿದ್ದರಾಮಯ್ಯ ತಿರುಗೇಟು

02:21 AM Aug 23, 2024 | Team Udayavani |

ಬೆಂಗಳೂರು: ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ಬಿಜೆಪಿ ನಾಯಕ ರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿರುವ ಥಾವರ್‌ಚಂದ್‌ ಗೆಹ್ಲೋಟ್ ಅವರ ಬಗ್ಗೆ ನಿಮಗೆ ಅಷ್ಟೊಂದು ಗೌರವ ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿ ಇರಬೇಕಾಗಿದ್ದ ಅವರನ್ನು ಇಲ್ಲಿ ತಂದು “ಪಂಜರದ ಗಿಣಿ’ಯನ್ನಾಗಿ ಯಾಕೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Advertisement

“ಎಕ್ಸ್‌’ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ ಸೇರುವಷ್ಟು ವಯಸ್ಸಾಗದೆ ಇದ್ದರೂ ಗೆಹ್ಲೋಟ್ ಅವರ ಸಕ್ರಿಯ ರಾಜಕೀಯ ಜೀವನ ಯಾಕೆ ಮೊಟಕು ಗೊಳಿಸಿದಿರಿ ಎಂದು ಕುಟುಕಿದ್ದಾರೆ. ಜತೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೇಗೆ ನಡೆಸಿ ಕೊಳ್ಳುತ್ತಿದ್ದೇವೆ ಎಂಬುದನ್ನು ನೋಡಿ ಕಲಿಯಿರಿ ಎಂದು ಉದಾಹರಣೆ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ ರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ, ಘನತೆಯಿಂದ ನಡೆಸಿ ಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿ ಬಿಜೆಪಿ ಕಲಿಯಬೇಕು ಎಂದಿದ್ದಾರೆ.

ದಲಿತರನ್ನು ಬಳಸಿ ಎಸೆಯುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜ ಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ ಎಂದಿದ್ದಾರೆ.

ವಾಜಪೇಯಿ ಅವರು ದಲಿತ ಸಮು ದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್‌ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯ ಸಂ ಮನಸ್ಸು ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಆರೋಪ ಹೊರಿಸಿತು.

Advertisement

ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದು ಕಿಡಿ ಕಾರಿದ್ದಾರೆ.ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ಬಿಜೆಪಿ ನಾಯಕರಿಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಗೆಹ್ಲೋಟ್ ಅವರ ಮೇಲೆ ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next