ಇಸ್ಲಾಮಾಬಾದ್/ನವದೆಹಲಿ: “ನಿಮ್ಮ ಬಳಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇದ್ದಾರೆ. ನಮ್ಮ ಬಳಿ ಅತ್ಯಂತ ವೇಗವಾಗಿ ಬೆಳೆಯುವ ಅರ್ಥ ವ್ಯವಸ್ಥೆ ಇದೆ’ ಹೀಗೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಛೇಡಿಸಿದ್ದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್.
ರಾವಲ್ಪಿಂಡಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್, “3 ವರ್ಷದ ಅವಧಿಯಲ್ಲಿ ನಮ್ಮ ಸರ್ಕಾರ ದೇಶದ ಅರ್ಥ ವ್ಯವಸ್ಥೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ. ಭಾರತವೂ ಸೇರಿದಂತೆ ಏಷ್ಯಾದ ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ, ಪಾಕಿಸ್ತಾನದ ಅರ್ಥ ವ್ಯವಸ್ಥೆ ಉತ್ತಮವಾಗಿದೆ’ ಎಂದಿದ್ದರು.
ಇದನ್ನೂ ಓದಿ:ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?
ಅದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಿಮ್ಮ ಬಳಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇದ್ದಾರೆ. ನಮ್ಮ ಬಳಿ ಅತ್ಯಂತ ವೇಗವಾಗಿ ಬೆಳೆಯುವ ಅರ್ಥ ವ್ಯವಸ್ಥೆ ಇದೆ. ಜತೆಗೆ ಯುನಿಕಾರ್ನ್ ಕಂಪನಿಗಳು ಮತ್ತು ಹೆಚ್ಚಿನ ಪ್ರಮಾಣದ ವಿದೇಶಿ ಬಂಡವಾಳ ಹೂಡಿಕೆ ನಮ್ಮ ದೇಶದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.