ಕೋವಿಡ್ 19 ಲಾಕ್‌ಡೌನ್ ಸಮಯದಲ್ಲಿ ಮದುವೆಯಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ಕುಮಾರ್ ಇತ್ತೀಚೆಗಷ್ಟೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಅನ್ನದಾತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಬರಹವೊಂದನ್ನು ಹಂಚಿಕೊಂಡಿದ್ದರು.
ಇದೀಗ ತಮ್ಮ ಪತ್ನಿ ರೇವತಿ ಜೊತೆ ಮೊದಲ ಬಾರಿಗೆ ಪತ್ನಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ. ಹೌದು! ನಿಖಿಲ್ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿದ್ದು, ಆಗಾಗ ಪತ್ನಿ ಜೊತೆಗಿನ ಫೋಟೋ ಮತ್ತು ತಾವು ಮಾಡುತ್ತಿರುವ ಇತರ ಕೆಲಸಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಲ್ಲದೇ ಇತ್ತೀಚೆಗಷ್ಟೇ ನಿಖಿಲ್ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ್ದು, ಪತ್ನಿ ರೇವತಿ ಜೊತೆ ವ್ಯಾಯಾಮ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ವಿಡಿಯೋದಲ್ಲಿ ರೇವತಿ ಅವರು ಸರಿಯಾಗಿ ಕಾಣುತ್ತಿಲ್ಲ. ಅವರ ಪಕ್ಕದಲ್ಲಿಯೇ ನಿಖಿಲ್ ವರ್ಕೌಟ್ ಮಾಡುತ್ತಿದ್ದಾರೆ.
ಅಂದಹಾಗೆ ಈ ವಿಡಿಯೋವನ್ನು ನಿಖಿಲ್ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಇನ್ನು ಕೋವಿಡ್ 19 ಹಿನ್ನೆಲೆಯಲ್ಲಿ ಈಗಾಗಲೇ ಹಲವು ನಟ-ನಟಿಯರು ಮನೆಯಲ್ಲಿ ಮಾಡುವ ಯೋಗ, ವರ್ಕೌಟ್ ಸೇರಿದಂತೆ ಹಲವಾರು ಚಟುವಟಿಕೆಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಳ್ಳುತ್ತಿದ್ದಾರೆ.