Advertisement

ಕಿವೀಸ್ ಪ್ರವಾಸ: ಧವನ್ ಬದಲಿಗೆ ಒನ್ ಡೇಗೆ ಪೃಥ್ವಿ ಶಾ ; ಟಿ20ಗೆ ಸಂಜು ಸ್ಯಾಮ್ಸನ್

10:12 AM Jan 22, 2020 | Hari Prasad |

ಮುಂಬಯಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ನಡೆಸುತ್ತಿದ್ದಾಗ ಭುಜದ ಗಾಯಕ್ಕೊಳಗಾಗಿರುವ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರ ಸ್ಥಾನವನ್ನು ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ತುಂಬಲಿದ್ದಾರೆ.

Advertisement

ನ್ಯೂಝಿಲ್ಯಾಂಡ್ ನಲ್ಲಿ ನಡೆಯಲಿರುವ ಏಕದಿನ ಪಂದ್ಯಕ್ಕೆ ಬಿಸಿಸಿಐ ಇಂದು ಭಾರತ ತಂಡವನ್ನು ಪ್ರಕಟಿಸಿದ್ದು ಅದರಲ್ಲಿ ಪೃಥ್ವಿ ಶಾ ಅವರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ಧವನ್ ಬದಲಿಗೆ ವಿಕೆಟ್ ಕೀಪರ್ ಕಂ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ.

ತನ್ನ ಮುಂಬರುವ ನ್ಯೂಝಿಲ್ಯಾಂಡ್ ಪ್ರವಾಸದಲ್ಲಿ ಭಾರತ ಐದು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಟಿ20 ಪಂದ್ಯ ಜನವರಿ 24ರಂದು ಆಕ್ಲಂಡ್ ನಲ್ಲಿ ನಡೆಯಲಿದೆ.

ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಪೃಥ್ವಿ ಶಾ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ಕೇದಾರ್ ಜಾಧವ್.

ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರು:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಸಂಜು ಸ್ಯಾಮ್ಸನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.

Advertisement
Advertisement

Udayavani is now on Telegram. Click here to join our channel and stay updated with the latest news.

Next