ಗುಂಡ್ಲುಪೇಟೆ (ಚಾಮರಾಜನಗರ): ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಮುಕ್ತಿ ಕಾಲೋನಿ ಗ್ರಾಮದಲ್ಲಿ ನಡೆದಿದೆ.
ಮುಕ್ತಿ ಕಾಲೋನಿ ಗ್ರಾಮದ ಬೀರೇಶ್(26) ಮೃತ ವ್ಯಕ್ತಿ. ಈತ ಪಟ್ಟಣದ ವೈನ್ಸ್‍ಸ್ಟೋರ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ, ಕೆಲಸ ಮುಗಿಸಿ ಮನೆಗೆ ಬಂದಿದ್ದು, ಜಾನುವಾರುಗಳ ಮೇವಿಗೆ ಮುಸುಕಿನ ಜೋಳದ ಕಡ್ಡಿ ಕೊಯ್ಯಲೆಂದು ಹೋಗಿದ್ದರು. ಈ ವೇಳೆ ಜಮೀನಿನ ನಡುವೆ ಹಾದು ಹೋಗಿದ್ದ ವಿದ್ಯುತ್ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ತಂತಿ ತುಳಿದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಕತ್ತಲಾಗುತ್ತಾ ಬಂದರೂ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಜಮೀನಿನೊಳಗೆ ಹೋಗಿ ನೋಡಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ
ನಂತರ ಸೆಸ್ಕ್ ಎಇಇ ಕೆ.ಎಂ.ಸಿದ್ದಲಿಂಗಪ್ಪ, ಕಿರಿಯ ಇಂಜಿನಿಯರ್ ಸೋಮಣ್ಣ, ವಿದ್ಯುತ್ ಪರಿ ವೀಕ್ಷಕಿ ಅರ್ಚನ, ಅಧಿಕಾರಿ ಶರಣಪ್ಪ ಬೇಟಿ ನೀಡಿ ಪರಿಶೀಲಿಸಿದರು. ಆಕಸ್ಮಿಕ ಘಟನೆ ಹಿನ್ನೆಲೆಯಲ್ಲಿ ಸೆಸ್ಕ್ ವತಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಕೊಡಿಸುವ ಭರವಸೆ ನೀಡಿದರು.
ಸಬ್ ಇನ್ಸ್ ಪೆಕ್ಟರ್ ಆರ್.ಕಿರಣ್ ಮತ್ತು ಸಿಬ್ಬಂದಿ ಪರಿಶೀಲಿಸಿ, ಸ್ಥಳ ಮಹಜರು ನಡೆಸಿದ ನಂತರ ಮೃತದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ