ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಅಂಗವಾಗಿ ಜಾರಿ ನಿರ್ದೇಶನಾಲಯ ಬುಧವಾರ (ಆಗಸ್ಟ್ 03) ನವದೆಹಲಿಯ ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯಾ ಲಿಮಿಟೆಡ್ ಕಚೇರಿಗೆ ಬೀಗ ಮುದ್ರೆ ಒತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಅಂದು ಜನೋತ್ಸವ ಪ್ರಶ್ನಿಸಿದವರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಮಾಡುತ್ತಿದ್ದಾರೆ: ಸಿಟಿ ರವಿ
ಯಾವುದೇ ಪೂರ್ವಾನುಮತಿ ಇಲ್ಲದೆ ಯಂಗ್ ಇಂಡಿಯಾ ಲಿಮಿಟೆಡ್ ಕಚೇರಿಯನ್ನು ಅಥವಾ ಆವರಣವನ್ನು ತೆರೆಯುವಂತಿಲ್ಲ ಎಂದು ಜಾರಿ ನಿರ್ದೇಶನಾಲಯ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
ಮತ್ತೊಂದೆಡೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಕಚೇರಿಯ ಹೊರಭಾಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಮಂಗಳವಾರ ನ್ಯಾಷನಲ್ ಹೆರಾಲ್ಡ್ ಕಚೇರಿ ಮತ್ತು ಇತರ 11 ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ನ್ಯಾಷನಲ್ ಹೆರಾಲ್ಡ್ ನ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.