Advertisement
ಈತನ ಸಾವಿಗೆ ಪಿರಿಯಾಪಟ್ಟಣ ಪೊಲೀಸರು ನೀಡಿದ ಕಿರುಕುಳವೇ ಕಾರಣವೆಂದು ಆರೋಪಿಸಿದ ಸಂಬಂ ಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರು, ಜಿಲ್ಲಾಸ್ಪತ್ರೆಯ ಶವಾ ಗಾರದ ಎದುರು ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸದೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದರು.
ಡಿ.9ರಂದು ಕುಶಾಲನಗರದ ಕೊಪ್ಪ ಸಮೀಪ ವೈದ್ಯ ದಿಲೀಪ್ ಅವರನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಮಂಗಳಾದೇವಿನಗರ ನಿವಾಸಿ, ಆಟೋ ಚಾಲಕ ಕೃಷ್ಣನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದರು. ಡಿ. 25ರಂದು ಕೃಷ್ಣನ ಮಕ್ಕಳಾದ ಜಯ ಕುಮಾರ ಮತ್ತು ಚಂದ್ರಕಾಂತ್ ಅವರನ್ನು ಕೂಡ ಪಿರಿಯಾಪಟ್ಟಣ ಪೊಲೀಸರು ವಿಚಾರಣೆಗಾಗಿ ಕೊಪ್ಪ ಸಮೀಪದ ಹೋಂಸ್ಟೇಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು. ಬಳಿಕ 6 ಮಂದಿ ಪೊಲೀಸರ ತಂಡ ಕೃಷ್ಣನ ಮನೆಗೆ ಬಂದು ಮನೆ ಮಂದಿಯ ಮೊಬೈಲ್ ಸಂಖ್ಯೆಗಳನ್ನು ಪಡೆದು ಬೆದರಿಕೆ ಹಾಕಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ನೊಂದು ಜಯಕುಮಾರ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶವಾಗಾರದ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್ ಅಧೀಕ್ಷಕ ಸುಂದರ್ ರಾಜ್, ಮೃತನ ಸಂಬಂಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು. ಪಿರಿಯಾಪಟ್ಟಣ ಪೊಲೀಸರು ಯುವಕರಿಗೆ ವಿಚಾರಣೆ ಹೆಸರಲ್ಲಿ ದೈಹಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ. ಪೊಲೀಸರ ದೌರ್ಜನ್ಯ ಮತ್ತು ಬೆದರಿಕೆಗೆ ಹೆದರಿ ಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರತಿಭಟನಕಾರರು ಆರೋಪಿಸಿದರು.
Related Articles
ದೈಹಿಕ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಪ್ರತಿಭಟನೆ ಕೈಬಿಟ್ಟು ಮರಣೋತ್ತರ ಪರೀಕ್ಷೆಗೆ ಸಹಕರಿಸುವಂತೆ ಅಧೀಕ್ಷಕ ಸುಂದರ್ ರಾಜ್ ಮನವಿ ಮಾಡಿದರು. ಮೇಲಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಬಳಿಕ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡ ಲಾ ಯಿ ತು.
ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಷಣ್ಮುಗ, ಗ್ರಾಮಾಂತರ ಠಾಣಾಧಿಕಾರಿ ಚೇತನ್, ದಲಿತ ಸಂಘಟನೆಯ ಮೋಹನ್ ಮೌರ್ಯ, ಎಚ್.ಪಿ. ಹರೀಶ್ ಮತ್ತಿತ್ತರರಿದ್ದರು.
Advertisement