ಮಂಗಳೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗಂಬಿಲದ ಮನೆಯೊಂದರಲ್ಲಿ ಗುರುವಾರ ಸಂಜೆ ( ಜೂ.16 ರಂದು) ನಡೆದಿದೆ.
Advertisement
ಹರ್ದೀಪ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ಖಾಸಗಿ ಕಾಲೇಜಿನಲ್ಲಿ 2 ನೇ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ.
ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಈತನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯರು ತಪಾಸಣೆ ನಡೆಸಿ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಮೃತ ಯುವಕ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.