Advertisement

ಸಾಲಬಾಧೆ ತಾಳದೇ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

01:22 PM Apr 16, 2022 | Team Udayavani |

ಕನಕಪುರ: ಸಾಲಬಾಧೆಗೆ ಹೆದರಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮನಹಳ್ಳಿ ಬಳಿ ನಡೆದಿದೆ.

Advertisement

ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಏಳಗಳ್ಳಿ ಗ್ರಾಮದ ರಾಜೇಶ್‌(24) ಮೃತ ಯುವಕ. ಕೈ ಸಾಲ ಮಾಡಿ ಕೊಂಡಿದ್ದ ಈತ ಸಾಲ ಬಾಧೆ ತಾಳಲಾರದೆ ಮನನೊಂದು ಹನುಮನಹಳ್ಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶುಕ್ರವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಹನುಮನಹಳ್ಳಿ ಕೆರೆಯಲ್ಲಿ ಶವ ಕಂಡ ಸ್ಥಳೀಯರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿದು ಗ್ರಾಮಾಂತರ ಠಾಣೆಯ ಪಿಎಸ್‌ಐ ಹೇಮಂತ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಶವನ್ನು ಮೇಲೆತ್ತಿ ಪೋಷಕರಿಗೆ ಮಾಹಿತಿ ನೀಡಿದ್ದರು. ಘಟನೆ ನಡೆದು ಮೂರು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ.

ಶವವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿ ಪೊಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next