Advertisement

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಮೃತ್ಯು

07:32 PM Nov 17, 2022 | Team Udayavani |

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ (ನ.17 ರಂದು) ನಡೆದಿದೆ.

Advertisement

ಕಳ್ಳಿಗೆ ಬ್ರಹ್ಮರಕೂಟ್ಲು‌ ನಿವಾಸಿ ಮುಜಾಮಿಲ್(19) ಮೃತಪಟ್ಟ ಯುವಕ. ‌

ನ. 9ರಂದು ರಾತ್ರಿ ವೇಳೆ ಯಮಹಾ ಬೈಕ್  ಚಲಾಯಿಸಿಕೊಂಡು ಹೋಗುವ ವೇಳೆ ತುಂಬೆ ಗ್ರಾಮದ ರಾಮಲ್ ಕಟ್ಟೆಯಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next