Advertisement

ಅಪಘಾತದಲ್ಲಿ ಗಂಭೀರ ಗಾಯಗೊಂಡು, ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

06:06 PM May 18, 2021 | Team Udayavani |

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಎರಡು ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Advertisement

ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (24)ಮೃತಪಟ್ಟ ಯುವಕ.

ಇದನ್ನೂ ಓದಿ : ತಿರುಪತಿ ದೇವಸ್ಥಾನದ ಗುತ್ತಿಗೆ ಕೆಲಸಗಾರನ ಮನೆಯಲ್ಲಿ 6.15 ಲಕ್ಷ ನಗದು,25 ಕೆಜಿ ನಾಣ್ಯ ಪತ್ತೆ

ಮಾ.10 ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯಗೊಂಡ ಅವರು ಕೋಮಾ ಸ್ಥಿತಿಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನಯ್ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಇಂದು ಕೊನೆಯುಸಿರೆಳೆದಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next