ಗಂಗೊಳ್ಳಿ : ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಗಾಂಜಾ ಸೇವನೆಗೆ ಯುವ ಜನತೆ ಬಲಿಯಾಗುತ್ತಿದ್ದು, ಯುವಕರ ಜೀವನವೇ ಶೂನ್ಯವಾಗುತ್ತಿದೆ. ಶಾಲಾ ಕಾಲೇಜುಗಳ ಸುತ್ತಲೂ ಗಾಂಜಾ ಸೇವನೆ ಹೆಚ್ಚಾಗುತ್ತಿದ್ದು, ಯುವ ಜನರು ಇದನ್ನು ಸೇವನೆಯನ್ನು ಬಹಿಷ್ಕರಿಸಬೇಕು ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ಮದ್ಯಪಾನ ವ್ಯವಸ್ಥೆ ಇಡೀ ಸಮಾಜವನ್ನೇ ಹಾಳು ಮಾಡುತ್ತಿದೆ. ಮದ್ಯಪಾನ, ಮಾದಕ ದ್ರವ್ಯ ಸೇವನೆ ಮುಂತಾದವುಗಳು ನಮ್ಮ ಸಮಾಜದ ಕೆಟ್ಟ ವ್ಯವಸ್ಥೆಯಾಗಿದೆ. ಯುವಜನರು ಇಂತಹ ದುಃಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ. ಮಕ್ಕಳು ಮಾದಕ ದ್ಯವ್ಯ ಸೇವನೆ ಯಿಂದ ದೂರ ವಿರುವಂತೆ ಕಾಳಜಿ ವಹಿಸಿ ಎಂದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ ಬಿ., ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್, ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಶಿವಾನಂದ ಪೂಜಾರಿ,
Advertisement
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ, ತಾಲೂಕು ಜನಜಾಗೃತಿ ವೇದಿಕೆ ಕುಂದಾಪುರ, ಬೈಂದೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಬೈಂದೂರು, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ರವಿವಾರ ಜರಗಿದ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಕರ್ನಾಟಕಕ್ಕೆ 4ನೇ ಸ್ಥಾನ
ಸಂಪನ್ಮೂಲ ವ್ಯಕ್ತಿ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ ವಿನ್ಸೆಂಟ್ ಪಾಯಸ್, ಶಾಲಾ ಕಾಲೇಜು ವಠಾರಗಳು ಮಾದಕ ವಸ್ತುಗಳ ಮಾರಾಟ ತಾಣವಾಗುತ್ತಿದೆ. ಮಾದಕ ದ್ರವ್ಯ ಸೇವನೆಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದ್ದು, ಮಾದಕ ದ್ರವ್ಯ ಸೇವನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂಗಡಿಗಳಲ್ಲಿ ಮದ್ಯ ಮಾರಾಟ ನಿರಾತಂಕವಾಗಿ ಸಾಗುತ್ತಿದೆ. ದೇಶದಲ್ಲಿ ಮರಣ ಹೊಂದುತ್ತಿರುವ 10 ಜನರ ಪೈಕಿ 5 ಜನರು ಧೂಮಪಾನ, ಮದ್ಯಪಾನ ಮತ್ತು ಮಾದಕ ದ್ಯವ್ಯ ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ. ದೇಶದ ಶೇ. 27ರಷ್ಟು ಪುರುಷರು ಮದ್ಯವ್ಯಸನಿಗಳಾಗಿದ್ದು, ಶೇ.1 0.2ರಷ್ಟು ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಅಂತರ್ಜಾಲವು ಮಾದಕ ವಸ್ತುಗಳಿಗೆ ಮಾರುಕಟ್ಟೆಯಾಗಿದ್ದು, ಮಾದಕ ವಸ್ತುಗಳ ಜಾಲದಲ್ಲಿ ಮಹಿಳೆಯರೇ ಕಿಂಗ್‌ಪಿನ್ ಎಂದರು.