Advertisement
ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಟಿಪ್ಪು ಸುಲ್ತಾನ್ ರ ಹಲವಾರು ಕ್ರಾಂತಿಕಾರಿ ಆಲೋಚನೆಗಳು ಮತ್ತು ಕಾರ್ಯಗಳು ನಮಗೆ ಇಂದಿಗೂ ಮಾದರಿ. ಟಿಪ್ಪು ಸುಲ್ತಾನ್ ಸದಾ ಹೊಸ ತಂತ್ರಜ್ಞಾನಕ್ಕೆ ತುಡಿಯುತ್ತಿದ್ದ. ಅವನು ಭಾರತದಲ್ಲಿ ಮೊದಲ ಬಾರಿಗೆ ಸೇನೆಯಲ್ಲಿ ಫ್ರೆಂಚ್ರ ಸಹಾಯದಿಂದ ಕ್ಷಿಪಣಿ ಮತ್ತು ರಾಕೇಟ್‌ಗಳನ್ನು ಬಳಸುವುದರ ಮೂಲಕ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಎಂದರು. ಹಜರತ್ ಖಾಜಾ ಬಂದೇ ನವಾಜ್ ದರ್ಗಾದ ಸಜ್ಜಾದ್ ನಶೀನ್ ಡಾ| ಸೈಯದ ಶಹಾ ಖುಸ್ರೋ ಹುಸೇನಿ ಮಾತನಾಡಿ, ಟಿಪ್ಪು ಸುಲ್ತಾನ್ ನೇರವಾಗಿ ಹುಲಿಯೊಂದಿಗೆ ಹೋರಾಡಿ ಜಯಶಾಲಿಯಾಗಿ ಮೈಸೂರು ಹುಲಿ ಎಂದು ಪ್ರಖ್ಯಾತರಾಗಿದ್ದು, ಹುಲಿಯನ್ನೇ ತನ್ನ ಲಾಂಛನವನ್ನಾಗಿ ಮಾಡಿಕೊಂಡಿದ್ದರು. ತನ್ನ ರಾಜ್ಯದ ಎಲ್ಲ ಜನತೆಯೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತ ಸಂಯಮದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ ಎಂದರು. ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಫರಾಜ್ ಉಲ್ ಇಸ್ಲಾಂ ಹಾಗೂ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ವಂದಿಸಿದರು. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತ ಕಿರು ಹೊತ್ತಿಗೆಯನ್ನು ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆ
ಮಾಡಿದರು.