Advertisement

ಯುವಜನತೆ ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಿ

12:05 PM Jul 24, 2017 | Team Udayavani |

ಮೈಸೂರು: ಯುವಜನತೆ ಸ್ವಾಭಿಮಾನ ಹಾಗೂ ಪ್ರಾಮಾಣಿಕತೆ ಮೈಗೂಡಿಸಿಕೊಂಡು ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಪತ್ರಿಕೋದ್ಯಮಿ ರಾಜಶೇಖರಕೋಟಿ ಹೇಳಿದರು.

Advertisement

ಜೆಡಿಎಸ್‌ ನಗರಾಧ್ಯಕ್ಷ ಕೆ.ಹರೀಶ್‌ಗೌಡ ಅಭಿಮಾನಿ ಬಳಗದಿಂದ ನಗರದ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಉದ್ಯೋಗಮೇಳ ಹಾಗೂ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಹೀಗಾಗಿ ಯುವ ಜನತೆ ಪ್ರಾಮಾಣಿಕವಾಗಿ ದುಡಿದರೆ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದರು.

ಇನ್ನೂ ಯುವಕರು ತಮ್ಮಲ್ಲಿರುವ ದೇಶಪ್ರೇಮ ಪ್ರದರ್ಶಿಸಲು ಯುದ್ಧವನ್ನೇ ಮಾಡಬೇಕಿಲ್ಲ. ಬದಲಿಗೆ ಜೀವನದಲ್ಲಿ ಸ್ವಾಭಿಮಾನಿಗಳಾಗಿ ಬದುಕುವ ಜತೆಗೆ ಕೆಲಸ ಮಾಡುವ ಕಡೆಗಳಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಬೇಕಿದೆ. ಆದ್ದರಿಂದ ಯುವಜನತೆ ಉದ್ಯೋಗಮೇಳದಲ್ಲಿ ನಡೆಯುವ ಸಂದರ್ಶನದಲ್ಲಿ ಅತ್ಯಂತ ಆತ್ಮವಿಶ್ವಾಸದಿಂದ ಪಾಲ್ಗೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಲಭಿಸಲಿದೆ ಎಂದು ತಿಳಿಸಿದರು.

ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ಜನ್ಮದಿನದಂದು ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಉದ್ಯೋಗಮೇಳ ಹಾಗೂ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಸಂಗತಿಯಾಗಿದೆ. ಆದ್ದರಿಂದ ಯುವಜನತೆ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕಿದೆ ಎಂದರು.

ಹರೀಶ್‌ಗೌಡ ಅಭಿಮಾನಿ ಬಳಗದಿಂದ ಕೇಕ್‌ ಕತ್ತರಿಸಿದರೆ, ಜೆಡಿಎಸ್‌ ಮುಖಂಡ ಭಾಸ್ಕರ್‌ ಉಡುಗೊರೆಯಾಗಿ ಬೆಳ್ಳಿ ಗದೆ ನೀಡಿ ಹರೀಶ್‌ಗೌಡರನ್ನು ಸನ್ಮಾನಿಸಿದರು.
ಮುಸ್ಲಿಂ ಧರ್ಮಗುರು ಮೌಲಾನ ಉಸ್ಮಾನ್‌ ಶರೀಫ್, ಮೇಯರ್‌ ಎಂ.ಜೆ. ರವಿಕುಮಾರ್‌, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ್‌, ಶಾಸಕರಾದ ಜಿ.ಟಿ. ದೇವೇಗೌಡ, ಸಂದೇಶ್‌ ನಾಗರಾಜು, ಮಾಜಿ ಸಂಸದ ಎಚ್‌.ವಿಶ್ವನಾಥ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

Advertisement

ಹುಟ್ಟುಹಬ್ಬ ಆಚರಣೆ: ಜೆಡಿಎಸ್‌ ನಗರಾಧ್ಯಕ್ಷ ಕೆ.ಹರೀಶ್‌ಗೌಡರ 48ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಸಾವಿರಾರು ಉದ್ಯೋಗಾ ಕಾಂಕ್ಷಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ವಿಪೊ›, ಥಿಯರವ್‌, ಥಾಟ್‌ಪೋಕಸ್‌ ಸೇರಿದಂತೆ ಹಲವು ಸಂಸ್ಥೆಗಳು ಪಾಲ್ಗೊಂಡಿದ್ದವು.  

ಮೈಸೂರು, ಚಾಮರಾಜನಗರ, ಬೆಂಗಳೂರು, ಮಂಡ್ಯ, ಹಾಸನ ಸೇರಿದಂತೆ ಇನ್ನಿತರ ಕಡೆಗಳಿಂದ ಆಗಮಿಸಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ವಿವಿಧ ಪದವಿ ಹೊಂದಿದ್ದ ನೂರಾರು ಉದ್ಯೋಗಕಾಂಕ್ಷಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next