Advertisement

ಕಿರುಕುಳ: ಯುವತಿ ಆತ್ಮಹತ್ಯೆಗೆ ಯತ್ನ ; ಸ್ಥಿತಿ ಗಂಭೀರ

12:36 PM Jun 07, 2017 | |

ಕುಂದಾಪುರ: ಮೂವರು ಯುವಕರ ಕಿರುಕುಳದಿಂದ ಬೇಸತ್ತ ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯ ಶೇಡಿಮನೆ ಗ್ರಾಮದ 17ರ ಹರೆಯದ ಯುವತಿ ಜೂ. 2ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Advertisement

ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿರುವ ಆರೋಪಿಗಳಾದ ಶೇಡಿಮನೆಯ ಪ್ರಸಾದ್‌ ಹೆಗ್ಡೆ, ಪ್ರಶಾಂತ್‌ ಹೆಗ್ಡೆ ಮತ್ತು ವಿನಯ ಶೆಟ್ಟಿ ವಿರುದ್ಧ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಎಸೆಸೆಲ್ಸಿ ಶಿಕ್ಷಣ ಪಡೆದಿರುವ ಯುವತಿಯು ಹೆಬ್ರಿಯಲ್ಲಿ ಹೊಲಿಗೆ ತರಬೇತಿಗೆ ಹೋಗುತ್ತಿದ್ದು, ಮೂರು ತಿಂಗಳಿನಿಂದ ಯುವಕರು ಕಿರುಕುಳ ನೀಡುತ್ತಿದ್ದರು. ಮೊಬೈಲ್‌ ಕರೆ ಹಾಗೂ ಎದುರಿನಲ್ಲಿ ಸಿಕ್ಕಿದಾಗ ಅಸಭ್ಯವಾಗಿ ವರ್ತಿಸುತ್ತಿದ್ದರು. ಜೂ. 2ರಂದು ಬಾಲಕಿಯ ಮೊಬೈಲ್‌ಗೆ ಕರೆ ಮಾಡಿದ ಈ ಮೂವರು ಯುವಕರು, ಆಕೆಯನ್ನು ತಾವು ಹೇಳಿದ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಬೆದರಿಕೆ ಹಾಕಿದರು ಎನ್ನುವ ಆರೋಪ ಕೇಳಿಬಂದಿದೆ.

ಈ ಎಲ್ಲ ಘಟನಾವಳಿಯಿಂದ ಹೆದರಿದ ಯುವತಿ ಅದೇ ದಿನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡ ಯುವತಿಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಗೆ ತೆರಳಿರುವ ಅಮಾಸೆಬೈಲು ಪೊಲೀಸರು ಯುವತಿಯಿಂದ ಹೇಳಿಕೆ ಪಡೆದುಕೊಂಡು ಮೂವರ ವಿರುದ್ಧ ಪೋಕೊÕ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದುಃಖತಪ್ತ ಮನೆಯವರು
ಪ್ರಕರಣದಿಂದ ತಂದೆ, ತಾಯಿ, ಮನೆಯ ಸದಸ್ಯರು ದುಃಖತಪ್ತರಾಗಿದ್ದು ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮನೆಯ ಸದಸ್ಯರು “ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು’ ಎಂದು ಒತ್ತಾಯಿಸಿದರು.

ಆರೋಪಿಗಳ ಬಂಧನಕ್ಕೆ ಕ್ರಮ
ಪ್ರಕರಣದ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಅವರನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧಿಧೀಕ್ಷಕ ಎನ್‌. ವಿಷ್ಣುವರ್ಧನ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next