ರಾಮನಗರ: ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಯುವತಿಗೆ ಚಾಕು ಹಾಕಿ ಕಿಡ್ನ್ಯಾಪ್ ಮಾಡಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ಆ.28ರ ಸೋಮವಾರ ನಡೆದಿದೆ.
Advertisement
ಸಂಜನಾ(16) ಕಿಡ್ನಾಪ್ ಆದ ಪ್ರಥಮ ಪಿಯುಸಿ ವಿದ್ಯಾರ್ಥಿನಿ.
ಇನ್ನೋವಾ ಕಾರಿನಲ್ಲಿ ಅಪಹರಣ ಮಾಡುವ ಮೊದಲು ಯುವತಿಯ ಕೈ ಹಾಗೂ ಬುಜದ ಭಾಗಕ್ಕೆ ಚಾಕು ಇರಿದಿದ್ದು, ಬಳಿಕ ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದಾರೆ.
ಸ್ಥಳಕ್ಕೆ ರಾಮನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸ್ಥಳೀಯರಿಂದಲೂ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.