Advertisement

ಕ್ಷಮೆ ಕೇಳಿದ ಪ್ರಧಾನಿ ಮೋದಿ; ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದ ಮಮತಾ ಬ್ಯಾನರ್ಜಿ

02:14 PM Dec 30, 2022 | Team Udayavani |

ಕೋಲ್ಕತಾ: ಪ್ರಧಾನಿ ಮೋದಿ ಅವರು ತಾಯಿಯ ಅಂತಿಮ ಸಂಸ್ಕಾರದ ಬೆನ್ನಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.

Advertisement

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೌರಾದಿಂದ ಎನ್ ಜೆಪಿ ಗೆ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಹೌರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.

ಕ್ಷಮೆ ಕೇಳುತ್ತೇನೆ

ನಾನು ಪಶ್ಚಿಮ ಬಂಗಾಳಕ್ಕೆ ಬರಬೇಕಿತ್ತು ಆದರೆ ವೈಯಕ್ತಿಕ ಕಾರಣಗಳಿಂದ ನಾನು ಅಲ್ಲಿಗೆ ಬರಲು ಸಾಧ್ಯವಾಗಲಿಲ್ಲ. ನಾನು ಬಂಗಾಳದ ಜನರಿಂದ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ಭಾರತೀಯ ರೈಲ್ವೇಯನ್ನು ಆಧುನೀಕರಿಸಲು ಕೇಂದ್ರ ಸರ್ಕಾರ ದಾಖಲೆಯ ಹೂಡಿಕೆ ಮಾಡುತ್ತಿದೆ. ಈಗ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ತೇಜಸ್ ಎಕ್ಸ್‌ಪ್ರೆಸ್, ಹಮ್ಸಫರ್ ಎಕ್ಸ್‌ಪ್ರೆಸ್‌ನಂತಹ ಆಧುನಿಕ ರೈಲುಗಳನ್ನು ತಯಾರಿಸಲಾಗುತ್ತಿದೆ. ಮುಂದಿನ 8 ವರ್ಷಗಳಲ್ಲಿ, ನಾವು ಆಧುನೀಕರಣದ ಹೊಸ ಪ್ರಯಾಣವನ್ನು ನೋಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.

Advertisement

ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ರಾಷ್ಟ್ರೀಯ ಗಂಗಾ ಮಂಡಳಿಯ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದರು.

ವಿಶ್ರಾಂತಿ ತೆಗೆದುಕೊಳ್ಳಿ
ನಮಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ಪಶ್ಚಿಮ ಬಂಗಾಳದ ಜನರ ಪರವಾಗಿ ನಾನು ನಿಮಗೆ ತುಂಬಾ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಿಮಗೆ ದುಃಖದ ದಿನ. ನಿಮ್ಮ ತಾಯಿ ಎಂದರೆ ನಮ್ಮ ತಾಯಿ ಕೂಡ. ನಿಮ್ಮ ಕೆಲಸವನ್ನು ಮುಂದುವರಿಸಲು ದೇವರು ನಿಮಗೆ ಶಕ್ತಿಯನ್ನು ನೀಡಲಿ, ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next