Advertisement
ಜಿಲ್ಲಾಧಿಕಾರಿ ಕಚೇರಿಯಸಭಾಂಗಣದಲ್ಲಿ ಗುರುವಾರ ನಡೆದ 2020-21 ನೇ ಸಾಲಿನ ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಕಡಿಮೆಯಾಗಿದ್ದು,ಎಲ್ಲ ಕಡೆಗಳಲ್ಲೂ ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಸಮರ್ಪಕವಾಗಿದೆ. ಆಕ್ಸಿಜನ್ ಕೊರತೆಯಿಲ್ಲ ಎಂದರು.
Related Articles
Advertisement
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರೋಹಿತ್ ಕಲರಾ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಗಳ ಕುರಿತು ವಿವರಿಸಿದರು. ಲೆಕ್ಕಾಧಿಕಾರಿ ಆರ್.ಆರ್.ಮುತಾಲಿಕ ದೇಸಾಯಿ ಪ್ರಸಕ್ತ ಸಾಲಿನಲ್ಲಿ ಕೋವಿಡ್ -19 ಇರುವುದರಿಂದ ಕ್ರಿಯಾ ಯೋಜನೆಯಡಿ ತಾಲೂಕುವಾರು ಕಾರ್ಯಕ್ರಮಗಳನ್ನು ಹಂಚಿಕೆ ಮಾಡಲಾಗಿದೆ. ಏಕ ಭಾರತ ಶ್ರೇಷ್ಠ ಭಾರತ ಮತ್ತು ಆತ್ಮನಿರ್ಭರ್ ಭಾರತ ಈ ವರ್ಷದ ಪ್ರಮುಖ ವಿಷಯಗಳಾಗಿದ್ದು, ಇದಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಇದಲ್ಲದೇ ಕೋವಿಡ್-19 ಅರಿವು ಹಾಗೂ ಯುವಕರಿಗೆ ಪ್ರಕೃತಿ ವಿಕೋಪ ನಿರ್ವಹಣೆಯ ಪೂರ್ವಸಿದ್ಧತಾ ತರಬೇತಿ, ಕೌಶಲ ಅಭಿವೃದ್ಧಿ, ಕ್ರೀಡಾಕೂಟ, ಸ್ವತ್ಛಗ್ರಾಮ, ಯುವ ಸಮಾವೇಶ, ಜಲಜಾಗರಣ ಅಭಿಯಾನ ಮತ್ತಿತರ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆಯಡಿ ಅನುಮೋದನೆ ನೀಡಲಾಗಿದೆ ಎಂದು ಮುತಾಲಿಕ್ ದೇಸಾಯಿ ವಿವರಿಸಿದರು.
ನೆಹರು ಯುವ ಕೇಂದ್ರದ 2020-21 ನೇ ಸಾಲಿನ ಕ್ರಿಯಾ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿಯಸದಸ್ಯರಾಗಿರುವ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಹುಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಉಪ ನಿರ್ದೇಶಕ ಗುರುನಾಥ ಕಡಬೂರ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಡಿ.ಎನ್.ಮಿಸಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ನೆಹರು ಯುವ ಕೇಂದ್ರದ ನಿವೃತ್ತ ಸಮನ್ವಯಾಧಿಕಾರಿ ಎಸ್. ಯು.ಜಮಾದಾರ, ಕಲಾತಂಡದ ಭರತ ಕಲಾಚಂದ್ರ, ಮಹಿಳಾ ಕಲ್ಯಾಣ ಸಂಸ್ಥೆಯ ವೈಜಯಂತಿ ಚೌಗಲಾ ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನುಪ್ರಚುರಗೊಳಿಸುವ “”ಸಂವಿಧಾನ ಪೀಠಿಕೆ ಗೋಡೆ”ಯ ಮೇಲೆ ಜಿಲ್ಲಾಧಿಕಾರಿಗಳು ಹಸ್ತಾಕ್ಷರ ಮಾಡಿದರು.