Advertisement

ಸಿದ್ದಾಪುರ :ಬಾಲಕಿಯನ್ನು ಗರ್ಭಿಣಿಯಾಗಿಸಿದ ಕಾಮುಕನ ಬಂಧನ

04:19 PM Jan 09, 2022 | Team Udayavani |

 ಸಿದ್ದಾಪುರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಗರ್ಭಿಣಿಯಾಗಿಸಿದ ಆರೋಪಿಯನ್ನು ಪೋಕ್ಸೋ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

Advertisement

ಯಡಮೊಗೆ ಗ್ರಾಮದ ಮಧುವನದ ಶ್ರೀಕಂಠ (23) ಎಂಬಾತ ಬಂಧಿತನಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಯು ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಾಗೂ ರಾತ್ರಿ ಆಕೆಯ ಮೇಲೆ ಅತ್ಯಾಚಾರವೆಸಗುತ್ತಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ.

ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ತೆರಳಿದಾಗ ಗರ್ಭ ಧರಿಸಿರುವುದು ಬೆಳಕಿಗೆ ಬಂದಿದೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next