ಉಳ್ಳಾಲ: ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ನೆತ್ತಿಲಪದವು ಸೈಟ್ ನ ರಕ್ಷಿತ್ ಸನಿಲ್ (22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಮೊಗವೀರಪಟ್ಣ ಸಮುದ್ರ ತೀರದಲ್ಲಿ ಅಪರೂಪದ ಕಡಲಹಂದಿ ಪತ್ತೆ!
ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದು ರಕ್ಷಿತ್ ಅದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಶಂಕಿಸಲಾಗಿದೆ.
ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.