ಮಂಗಳೂರು: ಸುರತ್ಕಲ್ ನಲ್ಲಿ ನಡೆದಿರುವ ಫಾಝಿಲ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮುಲ್ಕಿ, ಪಣಂಬೂರು ಮತ್ತು ಬಜಪೆ ಠಾಣಾ ವ್ಯಾಪ್ತಿಗಳಲ್ಲಿ ಶನಿವಾರದವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಶೀಘ್ರ ಪತ್ತೆ
ಕೊಲೆಗೆ ಕಾರಣ ವೇನೆಂದು ಗೊತ್ತಾಗಿಲ್ಲ. ಆರೋಪಿಗಳನ್ನೂ ಶೀಘ್ರ ಪತ್ತೆ ಮಾಡಲಾಗುವುದು.ಸಾರ್ವಜನಿಕರು ವದಂತಿಗೆ ಕಿವಿ ಕೊಡದೆ ಪೊಲೀಸರ ಮೇಲೆ ವಿಶ್ವಾಸ ವಿಟ್ಟು ಶಾಂತಿ ಕಾಪಾಡಬೇಕುಎಂದವರು ಮನವಿ ಮಾಡಿದ್ದಾರೆ
ಅವರದ್ದೇ ಆದ ಕಥೆಗಳನ್ನು ಯಾರೂ ಕಟ್ಟಬೇಡಿ ಎಂದು ಮನವಿ ಮಾಡಿದ್ದಾರೆ. ಎಲ್ಲರಿಗೂ ತನಿಖೆ ಆದ ಮೇಲೆ ವಿಚಾರವನ್ನು ತಿಳಿಸುತ್ತೇವೆ. ಘಟನೆಯ ಪ್ರಾಮಾಣಿಕ, ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಸುರತ್ಕಲ್ ನ ಹೃದಯ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಕಾಯುಧಗಳಿಂದ ದಾಳಿಗೊಳಗಾದ ಮಂಗಳ ಪೇಟೆಯ ಫಾಝಿಲ್ (23) ಮೇಲೆ ರಾತ್ರಿ ಅಂಗಡಿಯ ಎದುರಲ್ಲೇ ಮಾರಕಾಯುಧಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.