Advertisement

ಯುವ ಸಮ್ಮೇಳನದಲ್ಲಿ ಐದು ನಿರ್ಣಯ ಮಂಡನೆ

04:20 PM Jan 23, 2021 | Team Udayavani |

ಬೀದರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಗರದ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ತಾಲೂಕು 2ನೇ ಯುವ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರದ ಸಿಎಂ ವರ್ತನೆಗೆ ಮತ್ತು ರಾಜ್ಯದಲ್ಲಿ ಹಿಂದಿ ಭಾಷೆ ಹೇರುತ್ತಿರುವ ಕೇಂದ್ರ ಸರ್ಕಾರದ ನೀತಿಗೆ ಖಂಡನೆ ಸೇರಿದಂತೆ ಪ್ರಮುಖ ಐದು ನಿರ್ಣಯಗಳನ್ನು ಮಂಡನೆ ಮಾಡಲಾಯಿತು.

Advertisement

ಜಿಲ್ಲಾ ಕನ್ನಡ ಸಾಹಿತ್ಯ ಭವನದ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು, ಉರ್ದು ಮತ್ತು ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಿಸಬೇಕು. ನೆಹರು ಕ್ರೀಡಾಂಗಣ ಹತ್ತಿರದ ಪ್ರಭುರಾವ ಕಂಬಳಿವಾಲೆ ಬಸ್‌ ತಂಗುದಾಣವನ್ನು ಈ ಹಿಂದೆ ಇದ್ದ ಸ್ಥಳದಲ್ಲಿಯೇ ಮರು ನಿರ್ಮಾಣ ಮಾಡಬೇಕು.  ಮಹಾರಾಷ್ಟ್ರದ ಸಿಎಂ ವರ್ತನೆಗೆ ಮತ್ತು ರಾಜ್ಯದಲ್ಲಿ ಹಿಂದಿ ಭಾಷೆ ಹೇರುತ್ತಿರುವ ಕೇಂದ್ರ ಸರ್ಕಾರದ ನೀತಿಗೆ ಖಂಡಿಸುವುದು ಹಾಗೂ ಬೀದರನ ಎಲ್ಲಾ ಬಸ್‌ ತಂಗುದಾಣಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಬೇಕೆಂಬ ನಿರ್ಣಯವನ್ನು ಮಂಡಿಸಲಾಯಿತು.

ಸಾಹಿತಿ ಮಚ್ಛೇಂದ್ರ ಅಣಕಲ್‌ ಅವರು ಸಮಾರೋಪ ಭಾಷಣ ಮಾಡಿದರು. ಸಮ್ಮೇಳನಾಧ್ಯಕ್ಷ ಡಾ| ನಿಜಲಿಂಗ ರಗಟೆ ಮಾತನಾಡಿದರು. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಗೌರವಿಸಲಾಯಿತು. ಕಸಾಪ ತಾಲೂಕಾಧ್ಯಕ್ಷ ಎಂ.ಎಸ್‌ ಮನೊಹರ ಅಧ್ಯಕ್ಷತೆ ವಹಿಸಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ವಿರೂಪಾಕ್ಷ ಗಾದಗಿ, ಪ್ರಮುಖರಾದ ವಿಜಯಕುಮಾರ ಸೋನಾರೆ, ಶ್ರೀಮಂತ ಸಪಾಟೆ, ಎಂ.ಪಿ. ಮುದಾಳೆ, ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ್‌, ವೀರಶೆಟ್ಟಿ ಪಟೆ ಇದ್ದರು. ಸಚಿನ ವಿಶ್ವಕರ್ಮ ಸ್ವಾಗತಿಸಿದರು. ಟಿ.ಎಂ. ಮಚ್ಚೆ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next