Advertisement

ಸಂಸದ ಪ್ರತಾಪ್‌ಸಿಂಹ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

12:59 PM Mar 01, 2017 | Team Udayavani |

ಮೈಸೂರು: ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ವಿವಾದಾತ್ಮಕ ಪೋಸ್ಟ್‌  ಶೇರ್‌ ಮಾಡಿರುವ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭ‌ಟನೆ ನಡೆಸಿದರು.

Advertisement

ನಗರದ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿರುವ ಸಂಸದರ ಕಚೇರಿ ಎದುರು ಜಮಾಯಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗುವ ಜತೆಗೆ ಸಂಸದ ಪ್ರತಾಪ್‌ ಸಿಂಹ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭಾ ಸದಸ್ಯರಾಗಿ ಜವಾಬ್ದಾರಿ ಯುತ ಸ್ಥಾನದಲ್ಲಿರುವ  ಸಂಸದ ಪ್ರತಾಪ್‌ಸಿಂಹ, ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಗಿಲ್‌ ಹುತಾತ್ಮ ಯೋಧರ ಮಗಳ ಕುರಿತು ಈ ರೀತಿಯ ವಿವಾದಾತ್ಮಕ ಪೋಸ್ಟ್‌ ಹಾಕಿರುವುದು ಖಂಡನೀಯ. ಹೀಗಾಗಿ ಪ್ರತಾಪ್‌ಸಿಂಹ ಅವರು ಈ ಬಗ್ಗೆ ಎಚ್ಚೆತ್ತುಕೊಳ್ಳುವ ಮೂಲಕ ಕ್ಷಮೆಯಾಚಿಸ ಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next