ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ ಸೌದೆ ಒಲೆ ಉರಿಸಿ, ಪ್ರಧಾನಿ ಮೋದಿಯವರ ಅಣಕು ಪ್ರತಿಕೃತಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿರುವ ಕೇಂದ್ರ ಸರಕಾರ ದಿನನಿತ್ಯ ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಜನರ ಬದುಕಿಗೆ ಬರೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೇಶಕ್ಕೆ ಅಚ್ಚೇ ದಿನ್ ತರುತ್ತೇವೆಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷ ಧ ಸೇರಿ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನೂ ಏರಿಸಿದ್ದು, ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನ ಮೇಲೆ ತೆರಿಗೆ ಹೊರೆಯನ್ನೂ ಹೇರುತ್ತಿದೆ ಎಂದು ಆರೋಪಿಸಿದರು.
ಈಗಾಗಲೇ ರೈತ-ಕಾರ್ಮಿಕ-ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ದೇಶದ ಹಲವಾರು ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೊರೊನಾ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ. ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ. ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಮಾರ್ಟಿನ್, ಚಂದ್ರಕಲಾ ಮೊದಲಾದವರಿದ್ದರು.