ಕಿನ್ನಿಗೋಳಿ : ನದಿಯಲ್ಲಿ ಈಜಾಡಲು ಇಳಿದ ಸಂದರ್ಭ ಓರ್ವ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕರ್ನಿರೆ ಬಳಿಯ ಶಾಂಭವಿ ನದಿಯಲ್ಲಿ ರವಿವಾರ ಸಂಭವಿಸಿದೆ.
ಮೃತಪಟ್ಟ ದುರ್ದೈವಿಯನ್ನು ಬೆಂಗಳೂರು ನಿವಾಸಿ ಅನಿಲ್ (32) ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಯುವಕರು ಕಿನ್ನಿಗೋಳಿ ಕರ್ನಿರೆ ಬಳಿಯ ಶಾಂಭವಿ ನದಿಯ ಕಡೆಗೆ ಬಂದಿದ್ದಾರೆ, ಈ ವೇಳೆ ನದಿ ನೀರಿನಲ್ಲಿ ಈಜಾಡಲು ಮೂವರು ನೀರಿಗಿಳಿದ್ದಿದ್ದಾರೆ. ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಇದನ್ನು ಗಮನಿಸಿದ ಸ್ಥಳೀಯರು ನೀರಿಗೆ ಜಿಗಿದು ಮೂವರ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ಇಬ್ಬರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದ್ದು ಇನ್ನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪಿದ್ದಾನೆ.
ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.