Advertisement
ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ಯಂಗ್ ಪ್ರಸಿಡೆಂಟ್ ಆರ್ಗನೈಸೇಶನ್(ವೈಪಿಓ) ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Related Articles
Advertisement
ಸ್ವಾತಂತ್ರ್ಯದ ಈ 75 ವರ್ಷದಲ್ಲಿ ಭಾರತ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಅಭಿವೃದ್ಧಿ ಕಂಡಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟ್ರಾರ್ಟ್ ಅಪ್ ಸೇರಿದಂತೆ ಇತರೆ ಯೋಜನೆಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸಲು ಪ್ರಯತ್ನಿಸಿದೆ ಮತ್ತು ಈ ಮೂಲಕ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲಸವನ್ನು ಮಾಡಲಾಗಿದೆ ಎಂದು ಹೇಳಿದರು.
ಯುವಜನತೆ ಸಕರಾತ್ಮಕ ಆಲೋಚನೆಯಿಂದಾಗಿ ಉದ್ಯೋಗ ಪಡೆಯುವುದರ ಜೊತೆಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಬೇಕು. ಕೇಂದ್ರ ಸರಕಾರವು ಉದ್ಯಮಶೀಲತೆಗೆ ಹೆಚ್ಚಿನ ಬೆಂಬಲವನ್ನು ನೀಡುತ್ತಿದೆ. ಭಾರತದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸುವ ಸಲುವಾಗಿ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಆರಂಭಿಸಿದ್ದು, ಅನೇಕ ಉದ್ಯಮಿಗಳಿಗೆ ಸಹಕಾರಿಯಾಗಿದೆ. ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ ಇತರ ಕ್ಷೇತ್ರಗಳಿಗೂ ಅನ್ವಯವಾಗುತ್ತದೆ. ಭಾರತ ದೇಶ ಜಲ, ವನ ಸೇರಿದಂತೆ ನೈಸರ್ಗಿಕ ಮತ್ತು ಮೂಲ ಸಂಪನ್ಮೂಲದಲ್ಲಿ ಶ್ರೀಮಂತವಾಗಿರುವ ನಮ್ಮ ದೇಶದಲ್ಲಿ ವಿಫುಲ ಅವಕಾಶಗಳಿವೆ. ಬಂಡವಾಳ ಹೂಡಲು ಉತ್ತಮ ವಾತಾವರಣವಿದೆ. ಇಂತಹ ರಾಷ್ಟ್ರ ಮತ್ತಷ್ಟು ಅಭಿವೃದ್ಧಿ ಕಾಣಲು ಉತ್ಪಾದನೆ ಆದ್ಯತೆ ನೀಡಬೇಕು ಎಂದರು.ಕಾರ್ಯಕ್ರಮದಲ್ಲಿ ವೈಪಿಒ ಅಧ್ಯಕ್ಷರಾದ ತುಲಸ್ಯಾನ್, ಅಮಿತ್ ಚಾವ್ಲಾ ಮತ್ತು ತ್ರಿಷ್ಟಾ ರಾಮಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.