Advertisement

ಇಂದು ಹಸೆಮಣೆ ಏರಬೇಕಿದ್ದ ಯುವಕ ಕೋವಿಡ್-19 ಸೋಂಕಿಗೆ ಬಲಿ

10:58 AM Apr 29, 2021 | Team Udayavani |

ಚಿಕ್ಕಮಗಳೂರು: ಎಲ್ಲವೂ ಸರಿಯಾಗಿದ್ದರೆ ಆ ಮನೆಯಲ್ಲಿಂದು ಸಂಭ್ರಮದ ವಾತಾವರಣ ಇರಬೇಕಿತ್ತು. ಆದರೆ ಅಲ್ಲೀಗ ಸೂತಕದ ಛಾಯೆ ಮೂಡಿದೆ. ಕಾರಣ ಇಂದು ಹಸೆಮಣೆ ಏರಬೇಕಿದ್ದ ಯುವಕ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾನೆ. ಈ ಘಟನೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.

Advertisement

32 ವರ್ಷದ ಪೃಥ್ವಿರಾಜ್ ಎಂಬ ಯುವಕ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು.

ಇದನ್ನೂ ಓದಿ:ಅಭಿಯಾನ ಕಷ್ಟ… ವಿಪಕ್ಷ ಆಡಳಿತ ಇರುವ ನಾಲ್ಕು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಕೊರತೆ!

ಬೆಂಗಳೂರಿನಿಂದ ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಪೃಥ್ವಿರಾಜ್ ಗೆ ಕೋವಿಡ್ ಪಾಸಿಟಿವ್ ಆಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next