Advertisement

Youth: ಮದ್ಯದ ಅಮಲಿನಲ್ಲಿ ಯುವಕರ ಹೊಡೆದಾಟ: ವಿಡಿಯೋ ವೈರಲ್‌

03:53 PM Aug 15, 2023 | Team Udayavani |

ಬೆಂಗಳೂರು: ನಗರದ ಕ್ವೀನ್ಸ್‌ರಸ್ತೆಯಲ್ಲಿ ಯುವಕರ ಗುಂಪೊಂದು ಮದ್ಯದ ಅಮಲಿನಲ್ಲಿ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement

ಕಂಠಪೂರ್ತಿ ಕುಡಿದು ಪಬ್‌ನಿಂದ ಹೊರಬಂದ ನಾಲ್ಕೈದು ಮಂದಿ ಯುವಕರ ಗುಂಪು ಪರಸ್ಪರ ಗಲಾಟೆ ಮಾಡಿಕೊಂಡು ರಸ್ತೆ ಮೇಲೆ ಬಿದ್ದು ಹೊರಳಾಡಿದ್ದಾರೆ. ಪಬ್‌ನ ಬೌನ್ಸರ್‌ಗಳ ಕೂಡ ಜಗಳ ಬಿಡಿಸಲು ಮುಂದಾಗಿದ್ದಾರೆ. ಆದರೂ, ಸುಮ್ಮನಾಗದ ಯುವಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದಾರೆ.

ಅಲ್ಲದೇ, ಈ ಹುಚ್ಚಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿಧಾನಸೌಧ ಠಾಣೆ ಪೊಲೀಸರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next