Advertisement

Karnataka Government ಯುವನಿಧಿ ಯೋಜನೆ : ಪೋಸ್ಟರ್‌ ಬಿಡುಗಡೆ

12:31 AM Dec 27, 2023 | Team Udayavani |

ಮಣಿಪಾಲ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್‌ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾದ ಸರಕಾರಿ, ಖಾಸಗಿ ಹಾಗೂ ಸೊÌದ್ಯೋಗ ಹೊಂದದೇ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬಹುದಾಗಿದೆ ಎಂದರು.

ಜಿ.ಪಂ. ಸಿಇಒ ಪ್ರಸನ್ನ ಎಚ್‌., ಅಪರ ಜಿಲ್ಲಾಧಿಕಾರಿ ಮಮತಾ ದೇವಿಜಿ.ಎಸ್‌, ವಾರ್ತಾಧಿಕಾರಿ ಮಂಜುನಾಥ್‌ ಬಿ., ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಅರುಣ್‌, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಿಬಂದಿ ಪೃಥ್ವಿರಾಜ್‌ ಉಪಸ್ಥಿತರಿದ್ದರು.

ಮಂಗಳೂರು:ರಾಜ್ಯ ಸರಕಾರದ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವ ನಿಧಿ ಯೋಜನೆಯ ಪ್ರಚಾರಕ್ಕಾಗಿ ಕರಪತ್ರಗಳು ಮತ್ತು ಭಿತ್ತಿಪತ್ರಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಮತ್ತು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಡಾ| ಆನಂದ್‌ ಕೆ. ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

Advertisement

ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್‌ ಡಿ’ಸೋಜಾ, ಉದ್ಯೋಗ ವಿನಿಮಯ ಅಧಿಕಾರಿ ಎಚ್ಚರಪ್ಪ ಬಡಿಗೇರ್‌, ಸಹಾಯಕ ನಿರ್ದೇಶಕರಾದ ಸತ್ಯಲತಾ, ಸಹಾಯಕ ಸಾಂಖ್ಯಿಕ ಅಧಿಕಾರಿಯವರಾದ ವಿಜಯಲಕ್ಷ್ಮೀ, ನಗರ ಅಭಿಯಾನ ವ್ಯವಸ್ಥಾಪಕರಾದ ಅಚ್ಯುತ ನಾಯ್ಕ… ಮೂಡುಬಗೆ, ಎನ್‌. ಚಿತ್ತರಂಜನ್‌ ದಾಸ್‌ ಉಪಸ್ಥಿತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next