Advertisement

ಯುವಕರೇ ದೇಶದ ಸಂಪತ್ತು: ಹೇಮಲತಾ

05:43 PM Jan 18, 2022 | Team Udayavani |

ಬಾಗಲಕೋಟೆ: ಯುವಕರೇ ದೇಶದ ಸಂಪತ್ತಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು.

Advertisement

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಭಾಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ವಾರ್ತಾ ಇಲಾಖೆ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ಯುವ ಸಮೂಹ ನಮ್ಮ ದೇಶದ ಆಸ್ತಿಯಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಸ್ವಾಮಿ ವಿವೇಕಾನಂದರ ಯುವ ಜನತೆಯ ಮೇಲೆ ಅಪಾರ ಕಾಳಜಿ ವಹಿಸುತ್ತಿದ್ದರು. ಅವರ ಆದರ್ಶ ಅಳವಡಿಕೊಳ್ಳಬೇಕು. ಅವರು ಜೀವನದ ಮೌಲ್ಯ ತಿಳಿಸಿಕೊಡುವುದರ ಜತೆಗೆ ದಾರಿದೀಪವಾಗಿದ್ದಾರೆ ಎಂದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅಗತ್ಯವಾಗಿದ್ದು, ಕಾನೂನಿನ ಅರಿವು ಎಲ್ಲ ಪಡೆದುಕೊಳ್ಳಬೇಕು. ಅನ್ಯಾಯಕ್ಕೊಳಗಾದಾಗ ಅಸಹಾಯಕರಿಗೆ ಕಾನೂನು ಸೇವಾ ಪ್ರಾ ಧಿಕಾರದ ಮೂಲಕ ಉಚಿತವಾಗಿ ನೆರವು ನೀಡಲಾಗುತ್ತದೆ.

ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಜೀವಿಸುತ್ತಿದ್ದು, ಅವುಗಳ ಬಗ್ಗೆ ಅರಿವು ಸಹ ಮುಖ್ಯವಾಗಿದೆ ಎಂದರು. ಸಾಹಿತಿ ಡಾ| ಪ್ರಕಾಶ ಖಾಡೆ ಮಾತನಾಡಿ, ದೇಶ ಕಂಡ ಅಪ್ರತಿಮ ಸಂತ ಸ್ವಾಮಿ ವಿವೇಕಾನಂದರ ಸ್ಫೂರ್ತಿ ಯುವಕರಿಗೆ ಅಗತ್ಯವಾಗಿದೆ. ಸಂಸ್ಕೃತ, ಸುಸಂಸ್ಕೃತರಾಗಿ ಬಾಳಬೇಕೆ ವಿನಃ ವಿಕೃತರಾಗಿ ಬಾಳಬಾರದು. ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಸಂಸ್ಕೃತಿ ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದು ತಿಳಿಸಿದರು. ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್‌. ವೈ. ಕುಂದರಗಿ ಮಾತನಾಡಿ, ಯುವಕರು ಉತ್ತಮ ಸಾಧಕರಾಗುವುದರ ಜತೆಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು. ನೆಹರು ಯುವ ಕೇಂದ್ರದ ಯುವ ಅಧಿಕಾರಿ ಸುಷ್ಮಾ ಗವಳಿ, ಸೈಕ್ಲಿಂಗ್‌ ತರಬೇತುಗಾರ್ತಿ ಅನಿತಾ ನಿಂಬರಗಿ ಉಪಸ್ಥಿತರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next