Advertisement

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿಗೆ ಯುವಕ ಬಲಿ

12:26 PM Sep 04, 2022 | Team Udayavani |

ದೊಡ್ಡಬಳ್ಳಾಪುರ: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನದ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೂಗೇನಹಳ್ಳಿ ಗೇಟ್ ಬಳಿ ಭಾನುವಾರ (ಸೆ.4) ಬೆಳಿಗ್ಗೆ ನಡೆದಿದೆ.

Advertisement

ಮೃತ ಯುವಕನನ್ನು ಮಾವಿನಕುಂಟೆ ಗ್ರಾಮದ ರಾಜು (28 ವರ್ಷ) ಎಂದು ಗುರುತಿಸಲಾಗಿದೆ.

ಮೂಗೇನಹಳ್ಳಿ ಗೇಟ್ ಸಮೀಪದ ತಿರುವಿನಲ್ಲಿ ವೇಗವಾಗಿ ಬಂದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ.

ಘಟನೆಯಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದ ಕಸದ ಲಾರಿ ಕೂಡ ಮುಗುಚಿ ಬಿದ್ದಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ದ್ಯಾವಸಂದ್ರದ ಬಳಿ 2015ರಲ್ಲಿ ಸಹ ಬಿಬಿಎಂಪಿ ಕಸ ವಿಲೇವಾರಿ ಘಟಕಕ್ಕೆ ಕಸ ಸುರಿದು ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಮತ್ಯುಂಜಯ ಎನ್ನುವ ರೈತ ಮೃಪಟ್ಟಿದ್ದನು. ಮೃತಪಟ್ಟ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮೃತದೇಹವನ್ನು ದ್ಯಾವಸಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಗೆ ಅಡ್ಡವಾಗಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next