Advertisement

ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

08:16 PM Sep 26, 2020 | sudhir |

ಬೆಳಗಾವಿ: ವಾಯು ವಿಹಾರಕ್ಕೆ ತೆರಳಿದ್ದ ತುಂಬು ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಕೊಲೆಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ರಾಜಶ್ರೀ ರವಿ ಬನ್ನಾರ (21), ರೋಹಿಣಿ ಗಂಗಪ್ಪ ಹುಲಮನಿ (21) ಕೊಲೆಗೀಡಾದ ದುರ್ದೈವಿಗಳು.

ಮಚ್ಚೆ ಗ್ರಾಮದಲ್ಲಿ ಶನಿವಾರ ವಾಯುವಿವಾಹರಕ್ಕೆಂದು ಹೋಗುತ್ತಿರುವ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ ;ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳ ವಿವರ ಇಲ್ಲಿದೆ

Advertisement

ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next