Advertisement

ಗೋವಾದ ಯುವಕರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ : ಸಿಎಂ ಸಾವಂತ್

03:49 PM Nov 04, 2022 | Team Udayavani |

ಪಣಜಿ: ಕೆಲವು ಗೋವಾದ ಯುವಕರನ್ನು ಕೆಲಸದ ಹೆಸರಿನಲ್ಲಿ ಬೇರೆ ದೇಶಗಳಿಗೆ ಕರೆದೊಯ್ಯಲಾಗುತ್ತದೆ, ಆದರೆ ವಾಸ್ತವದಲ್ಲಿ ಅವರನ್ನು ಕಳ್ಳಸಾಗಣೆ ಮಾಡಲಾಗುತ್ತದೆ, ಏಜೆಂಟರ ಮೂಲಕ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಗಟ್ಟಲೆ ಹಣ ಕೊಟ್ಟಿರುವುದಾಗಿ ಕೆಲವರು ನನ್ನ ಬಳಿ ಬಂದಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಕೆಲವು ಜನರು ಏಜೆಂಟರ ಮೂಲಕ ವಿದೇಶದಲ್ಲಿ ಉದ್ಯೋಗ ಪಡೆಯಲು ಲಕ್ಷಗಟ್ಟಲೆ ರೂಪಾಯಿಗಳನ್ನು ಪಾವತಿಸುತ್ತಾರೆ.  ಪೊಲೀಸರು ಇಂತಹ ಪ್ರಕರಣಗಳಲ್ಲಿ ಸಕ್ರಿಯರಾಗಿರಬೇಕು ಮತ್ತು ಯಾರಾದರೂ ದೂರು ನೀಡುವವರೆಗೆ ಕಾಯಬೇಡಿ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೂಚನೆ ನೀಡಿದರು.

ವೇಶ್ಯಾವಾಟಿಕೆಗಾಗಿಯೂ ಮಹಿಳೆಯರ ಕಳ್ಳಸಾಗಾಟ ನಡೆಯುತ್ತಿದೆ. ಇಂತಹ ಘಟಕನೆಯನ್ನು ನಾವು ಸಹಿಸುವುದಿಲ್ಲ. ಇಂತಹ ಪ್ರಕರಣವನ್ನು ಬೇಧಿಸಲು ಮತ್ತು ಇಂತಹ ಘಟನೆ ನಡೆಯದಂತೆ ತಡೆಯಲು ಸಂಬಂಧಿತ ಇಲಾಖೆಯನ್ನು ಸಜ್ಜುಗೊಳಿಸಲಾಗುತ್ತಿದೆ. ಲೈಂಗಿಕ ವಿಷಯಗಳಿಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಅತ್ಯಂತ ಕೆಟ್ಟ ರೂಪಗಳಲ್ಲಿ ಒಂದಾಗಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶೀಯ ಮತ್ತು ವಿದೇಶಿಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಾಟ ನಿಲ್ಲಿಸಲು ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next