ತಿಳಿಸಲು ಕಾಂಗ್ರೆಸ್‌ನಿಂದ ಯುವ ಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ
ಮಧು ಪಾಲೇಗೌಡ ಹೇಳಿದರು.
Advertisement
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳುತ್ತಿದೆ. ರೂಪಾಯಿ ಮೌಲ್ಯ ಕುಸಿದು ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿಯವರು ವಿರೋಧ ಪಕ್ಷಗಳಮುಖಂಡರನ್ನು ಗುರಿಯಾಗಿರಿಸಿ ಸಿಬಿಐ, ಇಡಿ ಮತ್ತಿತರ ಸಂಸ್ಥೆಗಳ ಮೂಲಕ ದಬ್ಟಾಳಿಕೆ, ದೌರ್ಜನ್ಯ ಎಸಗುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಇದನ್ನು ದೇಶದ ಜನತೆಗೆ ತಿಳಿಸುವುದಕ್ಕಾಗಿ ಕನ್ಯಾಕುಮಾರಿಯಿಂದ ಹಿಮಾಲಯಕ್ಕೆ ಹೊರಟಿರುವ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕ್ರಾಂತಿ ಯಾತ್ರೆ ಡಿ. 20ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಪ್ರಧಾನಿ ವಿದೇಶ ಸುತ್ತೋದಕ್ಕಷ್ಟೇ ಸೀಮಿತ ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಬರಿ
ಭಾಷಣದಲ್ಲಿಯೇ ಪೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆಯೇ ವಿನಃ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಸೂಟು ಬೂಟು ಧರಿಸಿ ವಿದೇಶ ಸುತ್ತುವುದಕ್ಕಾಗಿಯೇ ಪ್ರಧಾನಿಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರ ತರುವಂತೆ ಜನತೆಯನ್ನು ಜಾಗೃತಗೊಳಿಸುವುದಕ್ಕಾಗಿ ಯುವ ಕ್ರಾಂತಿ ಯಾತ್ರೆಯನ್ನು ಆರಂಭಿಸಲಾಗಿದೆ. ಜಿಲ್ಲೆಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಆರು ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಭಾಗವಹಿಸಬೇಕು ಎಂದು ಮಧು ಪಾಲೇಗೌಡ ತಿಳಿಸಿದರು.