Advertisement
ಜಿಲ್ಲಾ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಸರ್ಕಾರಿ ಕಚೇರಿಗಳ ಸಂಕಿರ್ಣದಲ್ಲಿ ಆಯೋಜಿಸಿದ್ದ ಜನಪರ ಮಾಹಿತಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೂಟ್ಯೂಬ್‌ನಲ್ಲಿ ಪಾಠಗಳ ಪ್ರವಚನಗಳು ಲಭ್ಯವಾಗುವುದರಿಂದ ದೂರ ಶಿಕ್ಷಣ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಇಂದು ಅಂತರ್ಜಾಲ ಎಲ್ಲಡೆ ವ್ಯಾಪಿಸಿದೆ. ಯೂಟ್ಯೂಬ್ ಬಗ್ಗೆ ಬಹುತೇಕರು ಬಲ್ಲವರಾಗಿದ್ದಾರೆ. ಪ್ರವಚನಗಳ ವೀಡಿಯೋಗಳನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸಿ, ಮಾಹಿತಿ ಪಡೆದುಕೊಳ್ಳಬಹುದು. ಇದಲ್ಲದೇ ಪ್ರತಿ ತಾಲೂಕು ಕೇಂದ್ರಗಳಲ್ಲಿ ಲರ್ನರ್ ಸಪೋರ್ಟ್ ಸೆಂಟರ್‌ಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
Related Articles
Advertisement
6 ನೋಡಲ್ ಅಧಿಕಾರಿಗಳ ನೇಮಕ: ಕೆಎಸ್‌ಒಯುದ ವಿದ್ಯಾರ್ಥಿಗಳ ಪೈಕಿ ಅನೇಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಮ್ಮ ಬಳಿ ಹೇಳಿಕೊಳ್ಳಬಹುದು. ಇ-ಮೇಲ್, ವಾಟ್ಸಪ್ ಮೂಲಕವೂ ತಮ್ಮನ್ನು ಸಂಪರ್ಕಿಸಬಹುದು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಲು 6 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ತಾವು ಕುಲಪತಿಗಳಾದ ನಂತರ ಕಡತ ವಿಲೇವಾರಿ ಸೇರಿದಂತೆ ಹಲವು ಸುಧಾರಣೆಗಳನ್ನು ತಂದಿದ್ದೇವೆ. ವಿವಿಯ ಶುಲ್ಕ ಪಾವತಿಯನ್ನು ಆನ್‌ಲೈನ್ ಮೂಲಕವೇ ಪಾವತಿಸುವ ವ್ಯವಸ್ಥೆ ಜಾರಿಗೆ ತರುವುದಾಗಿ ಹೇಳಿದರು.
ಕೆಎಸ್‌ಒಯುನಲ್ಲಿ ಪ್ರವೇಶ ಪಡೆಯುವ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗ ಮುಗಿಸಿರಬೇಕು, ಕೆಲವು ಕೋರ್ಸ್‌ಗಳಿಗೆ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದವರು ಸರ್ಟಿಪಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಹುದು ಎಂದು ಹೇಳಿದರು.
ರಾಮನಗರದಲ್ಲಿ ಸ್ವಂತ ಕಟ್ಟಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಮನಗರ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಸ್ಥಳವನ್ನು ಗುರುತಿಸಲಾಗಿದೆ. ಕನಕಪುರ ವೃತ್ತದ ಬಳಿಯ ಲೇಔಟ್‌ನಲ್ಲಿ ವಿವಿಗೆ ಸ್ಥಳ ಇದ್ದು, ಅಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗುವುದು ಎಂದರು.
ಈ ವೇಳೆ ಜಿಲ್ಲೆಯ ಪ್ರಾದೇಶಿಕ ಕೇಂದ್ರ ಕಚೇರಿಯ ನಿರ್ದೇಶಕ ಡಾ.ವಿಜಯ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್. ಶಂಕರಪ್ಪ ಹಾಜರಿದ್ದರು.