Advertisement

ಪ್ರಧಾನಿ ಮೋದಿಯನ್ನು ಭೇಟಿಯಾಗುವ YSRCP ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ

09:44 AM May 26, 2019 | Sathish malya |

ಹೊಸದಿಲ್ಲಿ : ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮತ್ತು ಆಂಧ್ರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ನಾಳೆ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

Advertisement

ರೆಡ್ಡಿ ಅವರ ಪಕ್ಷ ಆಂಧ್ರ ಪ್ರದೇಶದಲ್ಲಿ ಮೊನ್ನೆ ಗುರುವಾರ ಪ್ರಚಂಡ ವಿಜಯವನ್ನು ದಾಖಲಿಸಿದೆ. ಮೋದಿ ಅವರೊಂದಿಗಿನ ಭೇಟಿಯಲ್ಲಿ ರೆಡ್ಡಿ ಅವರು ಎನ್‌ಡಿಎ ಗೆ ಬಾಹ್ಯ ಬೆಂಬಲ ಅಥವಾ ವಿಷಯಾಧಾರಿತ ಬೆಂಬಲ ನೀಡುವ ವಿಷಯವನ್ನು ಚರ್ಚಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಕೆಟಗರಿಯ ಸ್ಥಾನಮಾನದ ಭರವಸೆ ನೀಡುವ ಯಾರನ್ನೇ ಆದರೂ ತಮ್ಮ ಪಕ್ಷ ಬೆಂಬಲಿಸಲಿದೆ ಜಗನ್‌ಮೋಹನ್‌ ರೆಡ್ಡಿ ಅವರು ಚುನಾವಣಾ ಪ್ರಚಾರಾಭಿಯಾನದ ವೇಳೆ ಹೇಳಿದ್ದರು. ನಾಳೆ ಬೆಳಗ್ಗೆ ದಿಲ್ಲಿಗೆ ಆಗಮಿಸುವ ರೆಡ್ಡಿ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಗನ್‌ಮೋಹನ್‌ ರೆಡ್ಡಿ ಅವರು ಇದೇ ಮೇ 30ರಂದು ವಿಜಯವಾಡದಲ್ಲಿ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next