ಚಿಕ್ಕಮಗಳೂರು: ಮಾಜಿ ಶಾಸಕ ವೈಎಸ್‌ವಿ ದತ್ತ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಬಹಳ ದಿನಗಳದಿಂದ ಹರಿದಾಡುತ್ತಿದ್ದು, ಈಗ ಹಳೆಯ ಆಡಿಯೋವೊಂದು ವೈರಲ್ ಆಗಿದೆ.
ಇದು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆದ ಸಂಭಾಷಣೆಯ ಆಡಿಯೋ ಎನ್ನಲಾಗು ತ್ತಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೋದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ವೈಎಸ್‌ವಿ ದತ್ತ ಅವರೇ ಹೇಳಿಕೊಂಡಿದ್ದಾರೆ.
ಹಣಕಾಸಿನ ವಿಚಾರ ಸಂಬಂಧ ವ್ಯಕ್ತಿಯೊಬ್ಬರೊಂದಿಗಿನ ಸಂಭಾಷಣೆ ಆಡಿಯೋ ಇದಾಗಿದ್ದು, ಸಂಭಾಷಣೆ ನಡುವೆ ಕಾಂಗ್ರೆಸ್ ಸೇರುವ ಬಗ್ಗೆ ದತ್ತ ಅವರು ಮನಬಿಚ್ಚಿ ಹೇಳಿ ಕೊಂಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನುವ ಸುಳಿವು ನೀಡಿದ್ದಾರೆ.