Advertisement

Chikkamagaluru; ವೈಯಕ್ತಿಕ ಏನೇ ಇದ್ದರೂ ಪಕ್ಷದ ನಿಲುವಿಗೆ ಬದ್ಧ: ವೈಎಸ್ ವಿ ದತ್ತ

01:20 PM Jan 24, 2024 | Team Udayavani |

ಚಿಕ್ಕಮಗಳೂರು: ಪಕ್ಷದ ತೀರ್ಮಾನ ಹಾಗೂ ಪಕ್ಷದ ಅಸ್ತಿತ್ವ ಹಿನ್ನೆಲೆ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ನಿಲುವಿಗೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ವೈಎಸ್ ವಿ ದತ್ತ ಹೇಳಿದರು.

Advertisement

ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಎಲ್ಲರೂ ಚರ್ಚಿಸಿ ಪಕ್ಷದ ಅಸ್ತಿತ್ವದ ಹಿನ್ನೆಲೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದಾರೆ. ನಮ್ಮ ವೈಯಕ್ತಿಕ ನಿಲುವು ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.

2006ರಲ್ಲಿ ಇದೇ ಪ್ರಶ್ನೆ ಉದ್ಭವವಾಗಿತ್ತು. ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಇರುವ ಬಹುತೇಕರು ಎಚ್.ಡಿ.ಕುಮಾರಸ್ವಾಮಿ ಜತೆ ಇದ್ದರು ಎಂದರು.

ಇಂದು ವಿಚಿತ್ರ ರಾಜಕೀಯ ಸನ್ನಿವೇಶ ಸಂದಿಗ್ದ ಪರಿಸ್ಥಿತಿ ಎಲ್ಲರನ್ನು ಕಾಡುತ್ತಿದೆ. ಜಗದೀಶ್ ಶೆಟ್ಟರ್ ಕಟ್ಟ ಹಿಂದೂವಾದಿ ಅವರ ಇಡೀ ಕುಟುಂಬ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿತ್ತು. ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ತಿಳಿಸಿದರು.

Advertisement

ಜಿಲ್ಲಾ ಮಟ್ಟದಲ್ಲಿ ಪಕ್ಷ ಕಟ್ಟಲು ಸಾಧ್ಯವಾಗಿಲ್ಲವೆಂಬ ನೋವು ಇದೆ. ನನ್ನ ಕ್ಷೇತ್ರದಲ್ಲಿ ಹಣ, ಜಾತಿ ಬಲವಿಲ್ಲದಿದ್ದರೂ ನನ್ನನ್ನು ಶಾಸಕನನ್ನಾಗಿ ಜನರು ಆಯ್ಕೆ ಮಾಡಿದ್ದು, ನನ್ನ ಕ್ಷೇತ್ರದ ಜನತೆ ಜತೆ ಇರಬೇಕಿತ್ತು. ಅವರ‌ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅನಿವಾರ್ಯವಾಗಿದ್ದ ಹಿನ್ನೆಲೆ ಜಿಲ್ಲಾದ್ಯಂತ ಪಕ್ಷ ಕಟ್ಟಲು ಸಾಧ್ಯವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಹಾಗೆಂದ ಮಾತ್ರಕ್ಕೆ ನಿರಾಸೆಗೊಳ್ಳುವ ಅಗತ್ಯವಿಲ್ಲ ಜೆಡಿಎಸ್ ಪಕ್ಷ ಜಿಲ್ಲೆಯಲ್ಲಿ ಮತ್ತೇ ಪುಟಿದೇಳಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next